Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ದೆಹಲಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

delhi-market-fireನವದೆಹಲಿ: ರಾಜಧಾನಿ ದೆಹಲಿಯ ಸದರ್ ಬಜಾರ್ ಮಾರುಕಟ್ಟೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿರುವುದಾಗಿ ಹೇಳಲಾಗುತ್ತಿದ್ದು, ಸುದ್ದಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಯಾವುದೇ ರೀತಿಯ ಸಾವು, ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಬೆಂಕಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.

ಕೆಲ ಸ್ಥಳೀಯರು ಹೇಳುವ ಪ್ರಕಾರ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ

No Comments

Leave A Comment