Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ನೋಟ್ ಬ್ಯಾನ್‌…ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡಪಕ್ಷಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ದೊಡ್ಡ ನೋಟುಗಳ ರದ್ದತಿಯಿಂದ ದೇಶದ ಗ್ರಾಮೀಣ ಪ್ರದೇಶದ ಆರ್ಥಿಕ ವ್ಯವಹಾರಗಳು ತತ್ತರಿಸಿವೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು ತಕ್ಷಣ ಸರ್ಕಾರ ನೋಟು ರದ್ದತಿ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿವೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ತಾವು ಕೈಗೊಂಡಿರುವ ನಿರ್ಧಾರದ ಕುರಿತು ಸಂಸತ್ತಿನಲ್ಲಿ ಉತ್ತರ ನೀಡಬೇಕು ಎಂದು ಒತ್ತಾಯಿಸಿವೆ. ಈಗಾಗಲೇ ಸರ್ಕಾರ ತಮ್ಮ ಬೇಡಿಕೆಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿವೆ.

ಇನ್ನು ತೃಣಮೂಲ ಕಾಂಗ್ರೆಸ್ ಜಂತರ್‌ ಮಂತರ್‌ನಲ್ಲಿ ನೋಟ್ ಬ್ಯಾನ್ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ರಾಜ್ಯ ವ್ಯಾಪಿ ಚಳವಳಿ ನಡೆಸುತ್ತಿದೆ.

ಇನ್ನೊಂದೆಡೆ, 5000, 1000 ನೋಟುಗಳ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ತಡೆಯಾಜ್ಞೆ ನೀಡಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇದೆಲ್ಲದರ ನಡುವೆ ವಿತ್ತ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ನೋಟು ರದ್ದತಿ ನಂತರದ ಸಮಸ್ಯೆಗಳು, ಸರ್ಕಾರದ ಕ್ರಮಗಳು ಕುರಿತು ಮಾಧ್ಯಮಗೋಷ್ಟಿ ನಡೆಸಲಿದ್ದಾರೆ ಎನ್ನಲಾಗಿದೆ.

No Comments

Leave A Comment