Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ನೋಟು ರದ್ದು: ನವೆಂಬರ್‌ 28ರಂದು ದೇಶದಾದ್ಯಂತ ಪ್ರತಿಭಟನೆಗೆ ಪ್ರತಿಪಕ್ಷಗಳ ನಿರ್ಧಾರ

opepepನವದೆಹಲಿ: ನೋಟು ರದ್ದತಿ ಕ್ರಮದಿಂದ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು ನವೆಂಬರ್‌ 28ರಂದು ಕೇಂದ್ರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೋಟು ರದ್ದತಿಯ ಬಗ್ಗೆ ಸದನದಲ್ಲಿ ಉತ್ತರ ನೀಡಬೇಕೆಂದು ಆಗ್ರಹಿಸಿ ಬುಧವಾರ ಬೆಳಿಗ್ಗೆ ಸಂಸತ್‌ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದರು.

ಸದನದ ಕಲಾಪ ಆರಂಭವಾಗುತ್ತಿದ್ದಂತೆ ನೋಟು ರದ್ದತಿಯ ವಿಚಾರವಾಗಿ ಪ್ರತಿಪಕ್ಷ ಸದಸ್ಯರ ಗದ್ದಲ ಹೆಚ್ಚಾಯಿತು.

‘ಸದನದಲ್ಲಿ ಮಾತನಾಡಲು ಸ್ಪೀಕರ್‌ ನಮಗೆ ಅವಕಾಶವನ್ನೇ ನೀಡುತ್ತಿಲ್ಲ. ಪ್ರಧಾನಮಂತ್ರಿಗಳು ಇಲ್ಲಿ ಉಪಸ್ಥಿತರಿರಬೇಕೋ, ಬೇಡವೋ ಎಂಬುದು ಇಲ್ಲಿ ಪ್ರಶ್ನೆಯಲ್ಲ. ಪ್ರಶ್ನೆ ಇರುವುದು ನಮಗೆ ಮಾತನಾಡಲು ಅವಕಾಶ ನೀಡುತ್ತೀರೋ, ಇಲ್ಲವೋ ಎಂಬುದು’ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಕಿಡಿಕಾರಿದರು.

ಇದಕ್ಕೆ ತಿರುಗೇಟು ನೀಡಿದ ಸಚಿವ ಎಂ. ವೆಂಕಯ್ಯ ನಾಯ್ಡು, ‘ಪ್ರತಿಪಕ್ಷಗಳಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಬೇಕಾಗಿಲ್ಲ. ಪ್ರತಿಪಕ್ಷ ಸದಸ್ಯರು ನೋಟು ರದ್ದತಿ ವಿಚಾರದಲ್ಲಿ ದೇಶದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ದೂರಿದರು.

ಸಂಸತ್‌ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ‘ನೋಟು ರದ್ದತಿಯಿಂದ ಜನಸಾಮಾನ್ಯರಿಗೆ ಆಗಿರುವ ತೊಂದರೆ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.

No Comments

Leave A Comment