Log In
BREAKING NEWS >
BJP ಅಂತಿಮ ಪಟ್ಟಿ ಪ್ರಕಟ, 4 ಕ್ಷೇತ್ರ ನಿಗೂಢ; ಶೋಭಾಗೂ ಟಿಕೆಟ್ ಇಲ್ಲ....ನೋಯ್ಡಾ : ಮಹಾ ಪಾತಕಿ ಬಾಲರಾಜ್‌ ಭಾಟಿ ಎನ್‌ಕೌಂಟರ್‌ಗೆ ಬಲಿ...

ಚೀನದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿದ್ಯುತ್‌ ಘಟಕ ಕುಸಿದು 67ಸಾವು

china-tragedy-600

ಬೀಜಿಂಗ್: ನಿರ್ಮಾಣ ಹಂತದಲ್ಲಿದ್ದ ವಿದ್ಯುತ್ ಘಟಕವೊಂದರ ಒಂದು ಭಾಗ ಕುಸಿದು ಬಿದ್ದ ಪರಿಣಾಮ 67 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ.

ಚೀನಾದ ಕೇಂದ್ರ ಪ್ರಾಂತ್ಯ ಜಿಯಾಂಗ್ಸಿಯಲ್ಲಿನ ಫೆಂಗ್ ಶೆಂಗ್ ನಲ್ಲಿ ನಿರ್ಮಾಣದ ಹಂತದಲ್ಲಿದ್ದ ವಿದ್ಯುತ್ ಘಟಕದ ಕೂಲಿಂಗ್ ಟವರ್ ವೇದಿಕೆಯು ಬೆಳಗ್ಗೆ ಕುಸಿದು ಬಿದ್ದಿದೆ. ಆ ವೇಳೆ ಅದರ ಕೆಳಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಸದ್ಯ 67 ಮಂದಿ ಸಾವನ್ನಪ್ಪಿರುವುದಾಗಿ ಚೀನಾದ ಅಧಿಕೃತ ಸುದ್ದಿಸಂಸ್ಥೆ ಕ್ಸಿನ್ ಹುವಾ ವರದಿ ಮಾಡಿದೆ.

ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು 32 ಅಗ್ನಿಶಾಮಕ ಸಿಬ್ಬಂದಿ ಮತ್ತು 212 ಸೇನಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ದುರಂತದಲ್ಲಿ 67 ಮಂದಿ ಸಾವನ್ನಪ್ಪಿದ್ದು ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

No Comments

Leave A Comment