Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಮಣಿಪುರದಲ್ಲಿ ಉಗ್ರರ ದಾಳಿ: 5 ಯೋಧರಿಗೆ ಗಂಭೀರ ಗಾಯ

indian-army-borderಇಂಫಾಲ: ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿದ್ದ ಸೇನಾ ಕೇಂದ್ರ ಮೇಲೆ ಉಗ್ರರು ದಾಳಿ ಮಾಡಿದ್ದು, 5 ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಸಾಜಿಕ್ ತಂಪಕ್ ನಲ್ಲಿದ್ದ ಸೇನಾ ಕೇಂದ್ರ ಮೇಲೆ ಉಗ್ರರು ನಿನ್ನೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ದಾಳಿ ಮಾಡಿದ್ದಾರೆ. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆದಿವೆ. ದಾಳಿ ವೇಳೆ ಪ್ಯಾರಾ ವಿಶೇಷ ಸೇನಾ ಪಡೆಯ ಐವರು ಯೋಧರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಚಂದೇಲ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯ ಬಳಿ ಯೋಧರು ಗಡಿ ಕಾಯುತ್ತಿದ್ದರು. ಈ ವೇಳೆ ಉಗ್ರರು ರಿಮೋಟ್ ಕಂಟ್ರೋಲ್ಡ್ ಬಾಂಬ್ ವೊಂದನ್ನು ಸ್ಫೋಟಿಸಿದ್ದಾರೆ. ಸ್ಫೋಟ ಸಂಭವಿಸುತ್ತಿದ್ದಂತೆ ಒಳನುಸುಳಿರುವ ಉಗ್ರರು ಏಕಾಏಕಿ ಯೋಧರ ಮೇಲೆ ಮನಬಂದಂತೆ ಗುಂಡಿನ ಮಳೆ ಸುರಿಸಿದ್ದಾರೆ.

ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ತಿಳಿದುಬಂದಿದೆ.ತಪ್ಪಿಸಿಕೊಂಡ ಉಗ್ರರಿಗಾಗಿ ಇದೀಗ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ. ದಾಳಿ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

No Comments

Leave A Comment