Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪಂಜಾಬ್ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ದಾಳಿ: 5 ಉಗ್ರರು ಪರಾರಿ/Armed men free Khalistan terrorist from high-security jail

punjab-policeಚಂಡೀಗಢ: ಪಂಜಾಬ್’ನಲ್ಲಿರುವ ನಬಾಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ದಾಳಿ ಮಾಡಿದ್ದು, ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಸೇರಿದಂತೆ ಐವರು ಉಗ್ರರು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.

ಪೊಲೀಸರ ಸಮವಸ್ತ್ರ ಧರಿಸಿ ಬಂದಿರುವ 10 ಮಂದಿ ಶಸ್ತ್ರಾಸ್ತ್ರಧಾರಿಗಳು ಜೈಲಿನ ಒಳ ನುಗ್ಗಿದ್ದಾರೆ. ಈ ವೇಳೆ ನೂರು ಸುತ್ತು ಗುಂಡು ಹಾರಿಸಿ ಬಂಧನದಲ್ಲಿರಿಸಲಾಗಿದ್ದ ಖಾಲಿಸ್ತಾನ ವಿಮೋಚನಾ ದಳದ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂ ಸೇರಿದಂದೆ ನಾಲ್ವರು ಉಗ್ರರನ್ನು ಬಂಧನ ಮುಕ್ತ ಗೊಳಿಸಿ ಸಿನಿಮೀಯ ರೀತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಹರ್ಮಿಂದರ್ ಸೇರಿದಂತೆ ಗುರ್ಪ್ರೀತ್ ಸಿಂಗ್, ವಿಕಿ, ಗೋಂಧ್ರಾ, ನಿತಿನ್ ಡಿಯೋಲ್ ಹಾಗೂ ವಿಕ್ರಮ ಜೀತ್ ಸಿಂಗ್ ವಿಕಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ದಾಳಿಯೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಜೈಲಿನಲ್ಲಿ ಭದ್ರತಾ ಲೋಪಗಳಿರುವುದು ಕೃತ್ಯದಿಂದ ಬಹಿರಂಗಗೊಂಡಿದೆ. ದಾಳಿ ಹಾಗೂ ಉಗ್ರರು ಪರಾರಿಯಾಗಿರುವ ಹಿನ್ನೆಲೆಯಲ್ಲಿ ಪಂಜಾಬ್ ನಾದ್ಯತಂ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರು ಪರಾರಿಯಾಗಿರುವುದನ್ನು ಡಿಜಿಪಿ ಹೆಚ್.ಎಸ್. ದಿಲ್ಲೋನ್ ಅವರು ಖಚಿತಪಡಿಸಿದ್ದಾರೆ.

ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂಸಾಕಷ್ಟು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನ ಸೇರಿದಂತೆ ವಿದೇಶಗಳಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ನಿಧಿ ಸಂಗ್ರಹಿಸುತ್ತಿದ್ದ.

ಇದರಂತೆ ಖಚಿತ ಮಾಹಿತಿ ಆಧಾರದ ಮೇಲೆ ಪಂಜಾಬ್ ಪೊಲೀಸರು ಈತನನ್ನು 2014ರಲ್ಲಿ ಬಂಧನಕ್ಕೊಳಪಡಿಸಿದ್ದರು. ಪರಾರಿಯಾದವರ ಪೈಕಿ ವಿಕಿ ಗೊಂಡಾರ್ ಎಂಬಾತ ಕುಖ್ಯಾತ ಗ್ಯಾಂಗ್ ಸ್ಟರ್ ಆಗಿದ್ದರು, ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಹಚರರೊಂದಿಗೆ ಬಂಧನಕ್ಕೊಳಪಡಿಸಲಾಗಿತ್ತು.

A group of armed men in police uniform on Sunday attacked the Nabha Jail in Patiala and fled with five prisoners, including Khalistan Liberation Front chief Harminder Mintoo.

Police said a group of youths dressed in police uniform stormed the jail and opened indiscriminate fire at the high-security jail.

Five prisoners, including a hardcore terrorist, escaped.

Those who escaped include gangster Vicky Gondar, Gurpreet Sekhon, Nita Deol, Vikramjeet, and terrorist Mintoo, police said.

Mintoo was arrested by Punjab Police from Delhi’s IGI Airport in 2014. He was arrested in connection with 10 cases including the 2008 attack on Sirsa-based Dera Sacha Sauda chief Gurmeet Ram Rahim Singh and recovery of explosives at Halwara Air Force station in 2010.

A team of senior police officers rushed to the spot and a high alert has been issued across the state.udupi_utsavooo

No Comments

Leave A Comment