Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

‘ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ’:ಅಮಿತ್‌ ಶಾ

bjp-amithaಬೆಂಗಳೂರು: ‘ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದರು.

ಬಿಜೆಪಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಬೃಹತ್‌ ಏಕತಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ರಾಜ್ಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಕ್ಷದ ಪಾತ್ರ ಪ್ರಮುಖವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಜನ ಬಹುಮತ ನೀಡಲಿದ್ದಾರೆ’ ಎಂದರು.

‘ಹಿಂದುಳಿದ ವರ್ಗದ ಜನರಿಗಾಗಿಯೇ ಕೇಂದ್ರ ಸರ್ಕಾರ 54 ಯೋಜನೆಗಳನ್ನು ಜಾರಿಗೆ ತಂದಿದೆ. ಕಪ್ಪು ಹಣದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ ಸಾರಿದ್ದಾರೆ’ ಎಂದು ಶಾ ಹೇಳಿದರು.

ನಿತೀಶ್‌ ಕುಮಾರ್‌ಗೆ ಅಭಿನಂದನೆ
‘ನೋಟು ರದ್ದು ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿರುವ ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಅವರಿಗೆ ಧನ್ಯವಾದಗಳು’
– ಅಮಿತ್‌ ಶಾ
ಬಿಜೆಪಿ ಅಧ್ಯಕ್ಷ

udupi_utsavooo

No Comments

Leave A Comment