Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ 72ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಉಡುಪಿ ಜಿಲ್ಲೆಯನ್ನು ಬಿಜೆಪಿಯ ಭದ್ರ ಕೋಟೆಯನ್ನಾಗಿಸುವ ಗುರಿ’ – ಕೆ.ಉದಯಕುಮಾರ್ ಶೆಟ್ಟಿ

udaya-kಪಕ್ಷ ಸಂಘಟನೆಗೆ ಮಾದರಿಯಾಗಿರುವ ಉಡುಪಿ ಜಿಲ್ಲಾ ಬಿಜೆಪಿಯು ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರ ಸಮರ್ಥ ನೇತೃತ್ವದಲ್ಲಿ ಕ್ರಿಯಾಶೀಲ ಪದಾಧಿಕಾರಿಗಳು ಮತ್ತು ನಿಷ್ಠಾವಂತ ಕಾರ್ಯಕರ್ತರ ತಂಡದೊಂದಿಗೆ ಹುಮ್ಮಸ್ಸಿನೊಂದಿಗೆ ಕಾರ್ಯಪ್ರವೃತ್ತವಾಗಿದೆ.

ಕೇಂದ್ರದಲ್ಲಿ ಜನ ಮಾನಸದ ನೆಚ್ಚಿನ ಪ್ರಧಾನಿ ನರೇಂದ್ರ ಮೋದೀಜಿ ನೇತೃತ್ವದ ಜನಪರ ಸರಕಾರ ಎಲ್ಲ ವರ್ಗದ ಜನರ ಮನಸೂರೆಗೊಂಡಿದ್ದು, ರಾಜ್ಯದಲ್ಲಿ ಬಿಜೆಪಿಯ ಅದ್ವಿತೀಯ ಜನ ನಾಯಕ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಪ್ರಗತಿಪರ ಸರಕಾರವನ್ನು ಜನತೆ ಕಾತರದಿಂದ ಎದುರು ನೋಡುತ್ತಿದ್ದಾರೆ. ತಹ ನಿರ್ಣಾಯಕ ಹಂತದ ಪೂರಕ ವಾತಾವರಣದಲ್ಲಿ ಸಂಘಟಿತ ಪ್ರಯತ್ನದೊಂದಿಗೆ ಮುಂಬರುವ ಎಲ್ಲ ಚುನಾವಣೆಗಳನ್ನು ಗೆಲ್ಲುವ ಮೂಲಕ ಉಡುಪಿ ಜಿಲ್ಲೆಯನ್ನು ಮಗದೊಮ್ಮೆ ಬಿಜೆಪಿಯ ಭದ್ರಕೋಟೆಯನ್ನಾಗಿಸುವ ಗುರುತರವಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಉಡುಪಿ, ದ.ಕ., ಕೊಡಗು ಜಿಲ್ಲೆಗಳನ್ನೊಳಗೊಂಡಿರುವ ಬಿಜೆಪಿ ಮಂಗಳೂರು ವಿಭಾಗದ ನೂತನ ಪ್ರಭಾರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನೇಮಕಗೊಂಡಿರುವ ಉಡುಪಿ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ನುಡಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ನಡೆದ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್ ಹಾಗೂ ರಾಜ್ಯ, ಜಿಲ್ಲೆ, ಮಂಡಲಗಳು ಮತ್ತು ಜಿಲ್ಲಾ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

No Comments

Leave A Comment