Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ತಮಿಳುನಾಡು, ಪುದುಚೆರಿಯಲ್ಲಿ ಚಂಡಮಾರುತ ಭೀತಿ; ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

cyclone-tamilnaduಚೆನ್ನೈ: ಬಂಗಾಳಕೊಲ್ಲಿಯಲ್ಲಿನ ಚಂಡಮಾರುತ ಇದೇ ಶುಕ್ರವಾರ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಮಿಳುನಾಡು ಮತ್ತು ಪುದುಚೆರಿ ಮಧ್ಯೆ ವೇದಾರಣ್ಯಂ ಎಂಬಲ್ಲಿ ಕದ್ದಲೂರಿಗೆ ಸಮೀಪ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಇಂದು ಮಧ್ಯರಾತ್ರಿಯಿಂದ ಚೆನ್ನೈಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು ತಮಿಳುನಾಡು ಮತ್ತು ಪುದುಚೆರಿಯ ಉತ್ತರ ತೀರ ಪ್ರದೇಶಗಳಲ್ಲಿ ನಾಳೆಯಿಂದ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ನಾಡಾ ಎಂಬ ಚಂಡಮಾರುತ ಚೆನ್ನೈಯ ಆಗ್ನೇಯಕ್ಕೆ 770 ಕಿಲೋ ಮೀಟರ್ ದೂರದಲ್ಲಿದೆ. ಅದು ಪಶ್ಚಿಮಕ್ಕೆ ಚಲಿಸಿ ತೀವ್ರತೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಗಂಟೆಗೆ 45ರಿಂದ 55 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯಿದೆ. ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕದ್ದಲೂರು ಪುದುಚೆರಿಯಿಂದ 20 ಕಿಲೋ ಮೀಟರ್ ದೂರದಲ್ಲಿದ್ದು ಅಲ್ಲಿನ ಮುಖ್ಯಮಂತ್ರಿ ವಿ,ನಾರಾಯಣಸಾಮಿ, ಚಂಡಮಾರುತ ಬೀಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಮುದ್ರದ ತೀರ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದ್ದು, ನೆರೆ ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಕೇರಳದಲ್ಲಿ ಕೂಡ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

No Comments

Leave A Comment