Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಹುತಾತ್ಮ ಮೇಜರ್ ಅಕ್ಷಯ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

major-aksಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಗುರುವಾರ ನಗರಕ್ಕೆ ಕರೆತರಲಾಗಿದೆ.

ಅಕ್ಷಯ್ ಅವರ ಪಾರ್ಥೀವ ಶರೀರವನ್ನು ಯಲಹಂಕದ ವಾಯುನೆಲೆಗೆ ಈಗಾಗಲೇ ಕರೆತಲಾಗಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಯಲಹಂಕದಲ್ಲಿರುವ ಅವರ ನಿವಾಸಕ್ಕೆ ಪಾರ್ಥೀರ ಶರೀರವನ್ನು ರವಾನೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಯಲಹಂಕದ ವಾಯುನೆಲೆಯಲ್ಲಿ ಮೇಜರ್ ಅಕ್ಷಯ್ ಕುಮಾರ್ ಅವರಿಗೆ ವಾಯುಸೇನೆ ಅಂತಿಮ ಗೌರವವನ್ನು ಸಲ್ಲಿಸಿದ್ದು.

ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾದಹಳ್ಳಿ ಬಳಿಯ ಅವರ ಅಪಾರ್ಟ್ ಮೆಂಟ್ ಬಳಿ ಕುಟುಂಬ ಸದಸ್ಯರಿಗೆ ಅಂತಿಮ ನಮನಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಸಂಜೆ 4.30ರ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

No Comments

Leave A Comment