Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಐಟಿ ದಾಳಿ:ಸಿಎಂ ಆಪ್ತ ಅಧಿಕಾರಿಗಳಾದ ಚಿಕ್ಕರಾಯಪ್ಪ, ಜಯಚಂದ್ರ ಸಸ್ಪೆಂಡ್

_currency_760

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗಳನ್ನು ಅಮಾನುತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿನ್ನೆ ನಡೆದ ಆದಾಯ ತೆರಿಗೆ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಕಾವೇರಿ ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಹಾಗೂ ರಾಜ್ಯ ರಸ್ತೆ ಅಭಿವೃದ್ಧಿ ಯೋಜನಾ ಅಧಿಕಾರಿ ಜಯಚಂದ್ರ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಪಕ್ಷಗಳು ಆಗ್ರಹಿಸಿದ ಹಿನ್ನಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಅವರು ಅಮಾನುತು ನಿರ್ಧಾರವನ್ನು ಘೋಷಣೆ ಮಾಡಿದರು.

ಇದಕ್ಕೂ ಮೊದಲು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರವನ್ನು ತರಾಟೆದೆ ತೆಗೆದುಕೊಂಡಿದ್ದ ವಿಪಕ್ಷಗಳು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದವು. ಇದು ವಿಧಾನ ಪರಿಷತ್  ಕಲಾಪದಲ್ಲಿ ಭಾರಿ ಕೋಲಾಹಲವನ್ನೇ ಎಬ್ಬಿಸಿತ್ತು. ಇದೀಗ ವಿಪಕ್ಷಗಳ ಆಗ್ರಹಕ್ಕೆ ಮಣಿದಿರುವ ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳನ್ನು ಆಮಾನತು ಮಾಡಿದೆ.

ಅಧಿಕಾರಿಗಳ ಬಳಿ ಪತ್ತೆಯಾಗಿದ್ದು ಬರೊಬ್ಬರಿ 4.7 ಕೋಟಿ ರು.ಮೌಲ್ಯದ ಹೊಸ ನೋಟುಗಳು!ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಎಚ್ ಸಿ ಮಹದೇವಪ್ಪ ಅವರ ಆಪ್ತರು ಎಂದು ಹೇಳಲಾಗುತ್ತಿರುವ ಕಾವೇರಿ ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಹಾಗೂ ರಸ್ತೆ ಅಭಿವೃದ್ಧಿ ಯೋಜನಾ  ಅಧಿಕಾರಿ ಜಯಚಂದ್ರ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದರು.

ಬಾಣಸವಾಡಿ, ಡಾಲರ್ಸ್ ಕಾಲೋನಿ ಮತ್ತು ಚಂದ್ರ ಲೇಔಟ್‌ ಸೇರಿದಂತೆ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ದುಬಾರಿ ಲ್ಯಾಂಬೋರ್ಗಿನಿ ಕಾರು ಹಾಗೂ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು. ಇದಲ್ಲದೇ ಜಯಚಂದ್ರ ಆಪ್ತ ಗುತ್ತಿಗೆದಾರರಾಗಿದ್ದ ಇಬ್ರಾಹಿಂ ಷರೀಫ್  ಹಾಗೂ ರಾಮಲಿಂಗಂ ಎಂಬುವವರ ಮನೆ ಮತ್ತು ಕಚೇರಿಗಳ ಮೇಲೂ ಆಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಬ್ರಾಹಿಂ ಷರೀಫ್ ಹಾಗೂ ರಾಮಲಿಂಗಂ ಅವರ ಮೂಲಕವಾಗಿ ಜಯಚಂದ್ರ ಅವರು ನಕಲಿ ಗುತ್ತಿಗೆ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಹಣವನ್ನು ನುಂಗಿದ್ದರು ಎಂಬ ಆರೋಪಗಳು ಕೇಳಿಬಂದಿವೆ.6 ಕೋಟಿ ನಗದು, 7 ಕೆಜಿ ಚಿನ್ನದ ಗಟ್ಟಿ, 7 ಕೆಜಿ ಚಿನ್ನಾಭರಣ, 20 ಕೋಟಿ ಬೆಲೆ ಬಾಳುವ ದುಬಾರಿ ಲ್ಯಾಂಬೋರ್ಗಿನಿ ಕಾರು ಪತ್ತೆದಾಳಿ ವೇಳೆ ಆಧಿಕಾರಿಗಳು ಸುಮಾರು 6 ಕೋಟಿ ನಗದನ್ನು ಪತ್ತೆ ಮಾಡಿದ್ದು, ಈ ಪೈಕಿ ಸುಮಾರು 4.7 ಕೋಟಿ ರು.ಮೌಲ್ಯದ 2000 ರು. ಮುಖಬೆಲೆಯ ನೋಟುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಉಳಿದ ಹಣ 100 ಮತ್ತು 500  ರು.ಮುಖಬೆಲೆಯ ನೋಟುಗಳಾಗಿವೆ ಎಂದು ತಿಳಿದುಬಂದಿದೆ. ಇದಲ್ಲದೆ 7 ಕೆಜಿ ಚಿನ್ನದ ಗಟ್ಟಿಗಳು, 7 ಕೆಜಿ ಚಿನ್ನಾಭರಣಗಳು ಹಾಗೂ 20 ಕೋಟಿ ಬೆಲೆ ಬಾಳುವ ದುಬಾರಿ ಲ್ಯಾಂಬೋರ್ಗಿನಿ ಕಾರು ಸೇರಿದಂತೆ ವಿವಿಧ ಕಾರುಗಳು  ಹಾಗೂ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿವೆ ಮತ್ತು ಅಕ್ರಮ ಆಸ್ತಿ ಸಂಪಾದನೆ ಸಂಬಂಧ ಪ್ರಮುಖ ದಾಖಲೆಗಳು ಪತ್ತೆಯಾಗಿವೆ ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment