Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಬೆಂಗಳೂರಿನಲ್ಲಿ 5.63 ಕೋಟಿ ಜಪ್ತಿ ಪ್ರಕರಣ: ಸಿಬಿಐನಿಂದ ಇಬ್ಬರ ಬಂಧನ

it-raid-bngಬೆಂಗಳೂರು: ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜ್ಯ ಸರ್ಕಾರದ ಇಬ್ಬರು ಅಧಿಕಾರಿಗಳಿಂದ 5.63 ಕೋಟಿ ರುಪಾಯಿ ನಗದು ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೋಮವಾರ ಇಬ್ಬರನ್ನು ಬಂಧಿಸಿದ್ದಾರೆ.

ನಜೀರ್ ಅಹ್ಮದ್ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ಎಂಬುವವರನ್ನು ಸಿಬಿಐ ಅಧಿಕಾರಿಗಳು ಇಂದು ಬಂಧಿಸಿ, ಇಬ್ಬರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು ಐದು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಶಕ್ಕೆ ನೀಡಿದೆ.

ಪ್ರಕರಣ ಸಂಬಂಧ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಸೂರ್ಯನಾರಾಯಣ ಬೈರಿ, ಧನಲಕ್ಷ್ಮಿ ಬ್ಯಾಂಕ್ ಮ್ಯಾನೇಜರ್ ಉಮಾಶಂಕರ್ ರೇಣುಕ ಹಾಗೂ ಎಟಿಎಂ ಸೇವೆ ಒದಗಿಸುವ ಕಂಪನಿ ಸೇರಿದಂತೆ ಕೆಲವು ಖಾಸಗಿ ವ್ಯಕ್ತಿಗಳ ವಿರುದ್ಧವೂ ಸಿಬಿಐ ಎಫ್ಐಆರ್ ದಾಖಲಿಸಿದ್ದು, ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ.

ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಯೋಜನಾಧಿಕಾರಿ ಜಯಚಂದ್ರ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅವರ ನಿವಾಸ, ಕಚೇರಿಯ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಎರಡು ಸಾವಿರ ರುಪಾಯಿ ಮುಖ ಬೆಲೆಯ 5.63 ಕೋಟಿ ನಗದು ಹಾಗೂ 152 ಕೋಟಿ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದರು.

No Comments

Leave A Comment