Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಅಂಡಮಾನ್ ದ್ವೀಪದಲ್ಲಿ ಭಾರಿ ಮಳೆ: ಅಪಾಯಕ್ಕೆ ಸಿಲುಕಿದ 800 ಮಂದಿ ಪ್ರವಾಸಿಗರು!

andamanಪೋರ್ಟ್ ಬ್ಲೇರ್: ಅಂಡಮಾನ್ ದ್ವೀಪದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ನೂರಾರು ಪ್ರವಾಸಿಗರು ಅಪಾಯಕ್ಕೆ ಸಿಲುಕಿದ್ದು, ಪ್ರವಾಸಿಗರ ರಕ್ಷಣೆಗೆ ಭಾರತೀಯ ನೌಕಾಪಡೆಯ ಸೈನಿಕರು ಧಾವಿಸಿದ್ದಾರೆ ಎಂದು  ತಿಳಿದುಬಂದಿದೆ.

ಅಂಡಮಾನ್ ದ್ವೀಪ ಸಮೂಹದ ಹ್ಯಾವ್ಲಾಕ್ ದ್ವೀಪದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಸುಮಾರು 800 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದ್ದು. ಪ್ರವಾಸಿಗರ ರಕ್ಷಣೆಗಾಗಿ ಭಾರತೀಯ ನೌಕಾಪಡೆಯ ಮೂರು  ನೌಕೆಗಳು ಧಾವಿಸಿವೆ. ನೌಕಾಪಡೆಯ  ಬಿಟ್ರಾ, ಬಂಗಾರಂ, ಎಲ್ ಸಿಯು38 ಮತ್ತು ಕುಂಭೀರ್ ನೌಕೆಗಳು ಪಯಣ ಬೆಳೆಸಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲಿದ್ದಾರೆ.

ಪ್ರವಾಸಿಗರ ರಕ್ಷಣೆ ಕುರಿತಂತೆ ಇಂದು ಮುಂಜಾನೆಯೇ ಸ್ಥಳೀಯ ಆಡಳಿತ ಸೇನೆಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಕೂಡಲೇ ಸೈನಿಕರು ದ್ವೀಪದತ್ತ ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಡಮಾನ್  ದ್ವೀಪಸಮೂಹಗಳಲ್ಲೇ ಹ್ಯಾವ್ಲಾಕ್ ದ್ವೀಪ ಅತ್ಯಂತ ಸುಂದರ ಮತ್ತು ವಿಶಾಲ ದ್ವೀಪವಾಗಿದ್ದು, ದ್ವೀಪದಲ್ಲಿನ ಬೀಚ್ ಹಾಗೂ ಪ್ರಕೃತಿ ಸೌಂದರ್ಯ ನೋಡಲು ನಿತ್ಯ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ರಜಧಾನಿ ಪೋರ್ಟ್  ಬ್ಲೇರ್ ನಿಂದ ಈ ದ್ವೀಪ ಸುಮಾರು 40 ಕಿ.ಮೀ ದೂರದಲ್ಲಿದೆ.

ಹ್ಯಾವ್ಲಾಕ್ ನಲ್ಲಿ ಹವಾಮಾನ ವೈಪರೀತ್ಯ, ಭಾರಿ ಮಳೆ, ಚಂಡಮಾರುತ ಭೀತಿಇನ್ನು ಸತತ 2 ದಿನಗಳಿಂದ ಹ್ಯಾವ್ಲಾಕ್ ದ್ವೀಪದಲ್ಲಿ ಸುರಿಯುತ್ತಿರುವ ಮಳೆ ಇಂದೂ ಮುಂದುವರೆದಿದ್ದು, ಸಮುದ್ರದಲ್ಲಿ ಉಂಟಾಗಿರುವ ಭಾರಿ ಗಾಳಿ ಚಂಡಮಾರುತವಾಗಿ ಬದಲಾಗುವ ಅಪಾಯವಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹ್ಯಾವ್ಲಾಕ್ ದ್ವೀಪದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈಗಲೇ ಪರಿಸ್ಥಿತಿ ಕುರಿತು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಕಾರ್ಯಾಚರಣೆ ನೇತೃತ್ವ ವಹಿಸಿರುವ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment