Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ನೋಟು ನಿಷೇಧಕ್ಕೆ ಅಧಿವೇಶನ ಬಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸಮಾಧಾನ

pranab-mukherjeeನವದೆಹಲಿ: ನೋಟು ನಿಷೇಧ ಕುರಿತಂತೆ ಕಳೆದ ಮೂರು ವಾರಗಳಿಂದಲೂ ಸಂಸತ್ ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಯುಂಟು ಮಾಡಿರುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ನೋಟು ನಿಷೇಧ ನಿರ್ಧಾರಕ್ಕೆ ಅಧಿವೇಶನ ಬಲಿಯಾಗುತ್ತಿರುವುದರ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳು ಸಂಸತ್ ಕಲಾಪಕ್ಕೆ ಪದೇಪದೇ ಅಡ್ಡಿಪಡಿಸುವುದು ಸ್ವೀಕಾರಾರ್ಹವಲ್ಲ. ಬಹುಮತ ಹೊಂದಿರುವ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಒತ್ತಡ ಹೇರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸಂಸತ್ತು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದ್ದು, ಸಂಸದರೇ.. ನೀವು ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಎಂದು ಹೇಳಿದ್ದಾರೆ.  

ಮತದಾರರು ಸಂಸತ್ತಿನಲ್ಲಿ ಚರ್ಚೆ ನಡೆಸಲು ನಿಮ್ಮನ್ನು ಜನಪ್ರತಿನಿಧಿಗಳಾಗಿ ಕಳುಹಿಸಿದ್ದಾರೆಯೇ ವಿನಃ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಸಲುವಾಗಿ ಅಲ್ಲ. ಇತ್ತೀಚಿನ ದಿನಗಳಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಯುಂಟು ಮಾಡುವುದು ಹವ್ಯಾಸವಾಗಿ ಹೋಗಿದೆ.ಪ್ರತಿಭಟನೆ ಹಾಗೂ ಧರಣಿಗಳನ್ನು ಎಲ್ಲಿ ಬೇಕಾದರೂ ಮಾಡಬಹುದು. ಸಂಸತ್ತಿನಲ್ಲಿ ಸಂಸದರು ಸಾರ್ವಜನಿಕ ಪ್ರಾಮುಖ್ಯತೆಯುಳ್ಳ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕಿದೆ.

ನಾನು ಪ್ರತ್ಯೇಕವಾಗಿ ಯಾವುದೇ ರಾಜಕೀಯ ಪಕ್ಷವನ್ನು ಟೀಕಿಸುತ್ತಿಲ್ಲ. ಎಲ್ಲರೂ ಕೈಜೋಡಿಸಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

No Comments

Leave A Comment