Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್, 36 ರನ್‍ಗಳ ಜಯ

indiaಮುಂಬೈ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 36 ರನ್ ಗಳಿಂದ ಜಯಗಳಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ 195 ರನ್ ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು ಜಯಿಸಿದೆ.

ಇಂಗ್ಲೆಂಡ್ 400 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 631 ರನ್ ಗಳಿಗೆ ಆಲೌಟ್ ಆಗಿದ್ದು 231 ರನ್ ಗಳ ಮುನ್ನಡೆ ಪಡೆದಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ 195 ರನ್ ಗಳಿಗೆ ಆಲೌಟ್ ಆಗಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಪರ ಕೂಕ್ 46, ಜೆನ್ನಿಂಗ್ಸ್ 112, ರೂಟ್ 21, ಮೊಹಿನ್ ಅಲಿ 50, ಬಟ್ಲರ್ 76 ಮತ್ತು ಬಾಲ್ 31 ರನ್ ಗಳಿಸಿಸಿದ್ದರು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 24, ಮುರಳಿ ವಿಜಯ್ 136, ಚೇತೇಶ್ವರ ಪೂಜಾರ 47, ವಿರಾಟ್ ಕೊಹ್ಲಿ 235,  ಜಯಂತ್ ಯಾದವ್ 104 ರನ್ ಗಳಿಸಿದ್ದರು.

ಇಂಗ್ಲೆಂಡ್ ಪರ ರಶೀದ್ 4, ಮೊಹಿನ್ ಅಲಿ ಮತ್ತು ರೂಟ್ ತಲಾ 2 ವಿಕೆಟ್ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ.

No Comments

Leave A Comment