Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

3 ಸಚಿವರು,ಸಿಎಂ ಶೀಘ್ರ ರಾಜೀನಾಮೆ ನೀಡುತ್ತಾರೆ: ಬಿಎಸ್‌ವೈ ಭವಿಷ್ಯ

yeddyಶಿವಮೊಗ್ಗ : ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವ ರಾಜ್ಯ ಸರಕಾರದ 3 ಮಂದಿ ಸಚಿವರು ಶೀಘ್ರ ರಾಜೀನಾಮೆ ನೀಡಲಿದ್ದು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ರಾಜ್ಯ ಸರಕಾರದ ಸಚಿವರುಗಳು ದೊಡ್ಡ ಹಗರಣಗಳಲ್ಲಿ ಭಾಗಿಯಾಗಿದ್ದು ಕೆಲವರಿಗೆ ಮುಂದಿನ ದಿನಗಳಲ್ಲಿ ಶಿಕ್ಷೆಯಾಗಲಿದೆ ಎಂದರು.

ಎತ್ತಿನಹೊಳೆ ಹಗರಣ,ಸ್ಟೀಲ್‌ ಬ್ರಿಡ್ಜ್ ಹಗರಣದಲ್ಲಿ ಸಚಿವರುಗಳು ಭಾರಿ ಕಮಿಷನ್‌ ಪಡೆದಿರುವುದು ಕಂಡು ಬಂದಿದೆ. ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ  ಚಿಕ್ಕರಾಯಪ್ಪ ಮತ್ತು  ಜಯಚಂದ್ರ ಅವರೊಂದಿಗೆ ಸಂಪುಟದ ಸಚಿವರು ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ. ಈಗ ಸಚಿವರು ಶೀಘ್ರ  ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ಜೈಲಿಗೆ ಹೋಗುವ ಸಚಿವರ ಹೆಸರು ತಿಳಿಸಿ 

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಿಡಿ ಕಾರಿದ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳು ತುಂಬಾನೇ ಹಗುರವಾಗಿ ಮಾತನಾಡುತ್ತಿದ್ದು, ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಸಂಪುಟದಲ್ಲಿರುವ ಜೈಲಿಗೆ ಹೋಗುವ ಸಚಿವರ ಹೆಸರು ಬಹಿರಂಗಪಡಿಸಲಿ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಸಿಕ್ಕಿ ಬಿದ್ದಿರುವ ಅಧಿಕಾರಿಗಳೊಂದಿಗೆ ಶಾಮೀಲಾಗಿರುವ ಸಚಿವರುಗಳ ಹೆಸರು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ

ಸಂಗೋಳ್ಳಿ ರಾಯಣ್ಣ ಬ್ರಿಗೇಡ್‌ ಬಗ್ಗೆ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ. ಈಗಾಗಲೇ ಹಲವು ಭಾರಿ ಈಶ್ವರಪ್ಪ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಕೇಂದ್ರ ನಾಯಕರು ಎಲ್ಲವನ್ನೂ ಗಮನಿಸುತ್ತಿದ್ದು ಅವರೇ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇದೇ ವೇಳೆ ಈಶ್ವರಪ್ಪ ಅವರಿಗೆ ಪಕ್ಷದ ವತಿಯಿಂದ ಯಾವುದೇ ನೊಟೀಸ್‌ ನೀಡಿಲ್ಲ ಎಂದು ತಿಳಿಸಿದರು.

No Comments

Leave A Comment