Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಮುಂಬೈನಲ್ಲಿ ಭೀಕರ ದುರಂತ: ಮನೆ ಕುಸಿದು ಮೂವರ ಸಾವು, 12 ಮಂದಿಯ ರಕ್ಷಣೆ

mumbai-hಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದ್ದು, ಮನೆ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಮುಂಬೈನ ಮಹಾರಾಷ್ಟ್ರ ನಗರದ ಮನ್ಕುರ್ದ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸುಮಾರು 6.30 ಈ ದುರಂತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ವರೆಗೂ 12 ಮಂದಿಯನ್ನು ರಕ್ಷಣೆ  ಮಾಡಲಾಗಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರಬಹುದಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಪ್ರಸ್ತುತ ಮೂರು ಅಗ್ನಿಶಾಮಕ ದಳದ ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ರಕ್ಷಣಾ  ಕಾರ್ಯಾಚರಣೆ ನಡೆಸುತ್ತಿದ್ದಾರೆ.ಘಟನೆಯಲ್ಲಿ ನಾಲ್ವರು ಮಹಿಳೆಯರು, ನಾಲ್ಕು ಮಂದಿ ಪುರುಷರು ಹಾಗೂ ಏಳು ಮಕ್ಕಳು ಗಾಯಗೊಂಡಿದ್ದಾರೆ.

ಎರಡು ಆ್ಯಂಬುಲೆನ್ಸ್ ವಾಹನಗಳಲ್ಲಿ ಗಾಯಾಳುಗಳನ್ನು ಸಮೀಪದ ಶತಾಬ್ದಿ ಮತ್ತು ಸಿಯಾನ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಕಟ್ಟಡ ಕುಸಿತ ಸಂದರ್ಭದಲ್ಲಿ 15ಕ್ಕೂ ಹೆಚ್ಚು ಮಂದಿ ಇದ್ದರು ತಿಳಿದುಬಂದಿದೆ.

ಪೊಲೀಸರು ತಿಳಿಸಿರುವಂತೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಬೆಳಗ್ಗೆ ಲೈಟ್ ಹಾಕುತ್ತಿದ್ದಂತೆಯೇ ಸ್ಫೋಟವಾಗಿದೆ. ಪರಿಣಾಮ ಮನೆ ಕುಸಿದಿದೆ ಎಂದು ಹೇಳಿದ್ದಾರೆ.

No Comments

Leave A Comment