Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಪ.ಬಂಗಾಳ: ಹೌರಾ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ; 6 ಅಗ್ನಿಶಾಮಕ ವಾಹನಗಳ ದೌಡು

houra-stationಕೋಲ್ಕತಾ: ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ  ಕಾರ್ಯದಲ್ಲಿ ತೊಡಗಿದೆ.

ಹೌರಾ ನಿಲ್ದಾಣದ ಹಳೆಯ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿದ್ದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ  ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ನಿಲ್ದಾಣದ ಫುಡ್ ಫ್ಲಾಜಾ ಸಂಕೀರ್ಣದಲ್ಲಿ  ಮೊದಲು ಬೆಂಕಿ ಹೊತ್ತಿಕೊಂಡಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಈ ವರೆಗೂ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಅಥವಾ ಗಾಯಗೊಂಡವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.

ಆದರೂ ಸ್ಥಳಕ್ಕಾಗಮಿಸಿರುವ ರೈಲ್ವೇ ಪೊಲೀಸರು ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment