Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭ... ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ದೆಹಲಿಯಲ್ಲಿ ಮತ್ತೊಂದು ಕ್ರೌರ್ಯ; ಕಾರಿನಲ್ಲಿ ಯುವತಿ ಮೇಲೆ ಅತ್ಯಾಚಾರ!

delhi-rapeನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಹೀನ ಕೃತ್ಯಕ್ಕೆ ಸಾಕ್ಷಿಯಾಗಿದ್ದು, ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಕಾರಿನಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರ ಮಾಡಲಾಗಿದೆ.

ನಿನ್ನೆ ತಡರಾತ್ರಿಯಲ್ಲಿ ಘಟನೆ ನಡೆದಿದ್ದು, ಗೃಹ ಸಚಿವಾಲಯದ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲೇ ಯುವತಿ ಮೇಲೆ ಅತ್ಯಾಚಾರ ಮಾಡಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ನಿನ್ನೆ ರಾತ್ರಿ ಸುಮಾರು 9 ಗಂಟೆ ಸುಮಾರಿನಲ್ಲಿ ಏಮ್ಸ್ ಗೆ  ತೆರಳಲು ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಲಿಫ್ಟ್ ಕೊಡುವುದಾಗಿ ಹೇಳಿ ಕಾರು ಹತ್ತಿಸಿಕೊಂಡ ದುಷ್ಕರ್ಮಿ ಮೋತಿಭಾಗ್ ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಬಳಿಕ ಯಾರಿಗಾದರೂ ವಿಚಾರ  ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಪರರಾಯಾಗಿದ್ದಾನೆ.ಕೂಡಲೇ ಯುವತಿ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಯುವತಿ ನೀಡಿದ ಮಾಹಿತಿಯಾಧರಿಸಿ ತುರ್ತು ಕಾರ್ಯಾಚರಣೆ ನಡೆಸಿ ಅತ್ಯಾಚಾರ ಗೈದ ದುಷ್ಕರ್ಮಿಯನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ  ಪ್ರಕಾರ ಅತ್ಯಾಚಾರಕ್ಕೆ ಬಳಸಲಾದ ಕಾರು ಸಿಐಎಸ್ ಎಫ್ ಕಾನ್ಸ್ ಟೇಬಲ್ ನದ್ದು ಎಂದು ತಿಳಿದುಬಂದಿದೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹಾಗೂ ಸಂತ್ರಸ್ತ ಯುವತಿ ಇಬ್ಬರನ್ನೂ ವೈದ್ಯಕೀಯ  ಪರೀಕ್ಷೆ ಒಳಪಡಿಸಿದ್ದಾರೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

2012ರಲ್ಲಿ ನಡೆದ ನಿರ್ಭಯಾ ಪ್ರಕರಣದ ಬೆನ್ನಲ್ಲೇ ದೆಹಲಿಯಲ್ಲಿ ಸತತವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ನಡೆಯುತ್ತಿದ್ದು, ಇದೇ ಮೊತಿಭಾಗ್ ನಲ್ಲಿ ಕಳೆದ ಒಂದು ವಾರದ ಹಿಂದಷ್ಟೇ ನರ್ಸಿಂಗ್ ವಿದ್ಯಾರ್ಥಿನಿಗೆ ಕೆಲಸ  ಕೊಡಿಸುವುದಾಗಿ ನಂಬಿಸಿ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ದಾಖಲಾಗಿದೆ.

No Comments

Leave A Comment