Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪ್ರಧಾನಿ ಮೋದಿ ಭೇಟಿಯಾದ ರಾಹುಲ್: ರೈತರ ಸಾಲ ಮನ್ನಾ ಮಾಡುವಂತೆ ಮನವಿ ಪತ್ರ ಸಲ್ಲಿಕೆ

opposition-meets-modiನವದೆಹಲಿ: ರೈತರ ಸಾಲ ಮನ್ನಾ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಇಂದು ಬೆಳಿಗ್ಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರುವ ರಾಹುಲ್ ಗಾಂಧಿಯವರು 5 ನಿಮಿಷಗಳ ಕಾಲ ಮೋದಿಯವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.ಮಾತುಕತೆ ವೇಳೆ ರೈತರ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿರುವ ರಾಹುಲ್ ಗಾಂಧಿಯವರು, ರೈತರ ಸಾಲವನ್ನು ಮನ್ನಾ ಮಾಡುವಂತೆ ಮನವಿ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದಾರೆಂದು ತಿಳಿದುಬಂದಿದೆ.

ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ಮನವಿ ಪತ್ರವನ್ನು ಪ್ರಧಾನಿ ಮೋದಿಯವರು ಸ್ವೀಕರಿಸಿದ್ದಾರೆ.

ರೈತರ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮೋದಿಯವರು ಒಪ್ಪಿಕೊಂಡಿದ್ದು, ರೈತರ ಸಾಲ ಮನ್ನಾ ಕುರಿತಂತೆ ಮೋದಿಯವರು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.ಮನವಿ ಸಲ್ಲಿಸಿದ ಬಳಿಕ ರೈತರ ಸಮಸ್ಯೆ ಬಗ್ಗೆ ಮೋದಿಯವರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮೋದಿಯವರು ಸಮಸ್ಯೆಯನ್ನು ಆಲಿಸಿದ್ದರೇ ವಿನಃ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ಹಾಗೂ ಸಾಲ ಮನ್ನಾ ಕುರಿತಂತೆ ಯಾವುದೇ ಮಾತನ್ನೂ ಆಡಲಿಲ್ಲ.

ದೇಶದಲ್ಲಿ ಇಂದು ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳಿಂದಾಗಿ ರೈತರು ಆತ್ಮಹತ್ಯೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೋಧಿ ಆಮದುಗಳ ಮೇಲೆ ಸುಂಕವನ್ನು ಕಡಿತಗೊಳಿಸುವುದು ವಿನಾಶಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

No Comments

Leave A Comment