Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ

air-india-building-fireಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ಮುಂಬೈನ ನಾರಿಮನ್ ಹೌಸ್ ಹತ್ತಿರವಿರುವ ಏರ್ ಇಂಡಿಯಾ ಕಟ್ಟಡದ 22ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದ್ದು, 4 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಬೆಂಕಿ ಅವಘಡಕ್ಕೆ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

No Comments

Leave A Comment