Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಮತ್ಸ್ಯ ಸಂಪತ್ತು ಸಂರಕ್ಷಣೆಗೆ ನೂತನ ನೀತಿ- ಪ್ರಮೋದ್ ಮಧ್ವರಾಜ್

dscn4205ಉಡುಪಿ:ಬಂದರುಗಳ ಮತ್ತು ಮೀನುಗಾರರ ಅಭಿವೃದ್ಧಿಯ ಜೊತೆಗೆ ಮತ್ಸ್ಯ ಸಂಪತ್ತಿನ ಸಂರಕ್ಷಣೆಯ ಹೊಣೆಯೂ ನಮ್ಮ ಮೇಲಿದೆ. ಈ ಕಾರಣಕ್ಕೆ ಮೀನುಗಾರಿಕಾ ನೀತಿಯನ್ನು ರಚಿಸಲಾಗುವುದು ಎಂದು ಮೀನುಗಾರಿಕೆ, ಯುವಜನಸಬಲೀಕರಣ ಮತ್ತು ಕ್ರೀಡಾ ಸಚಿವರು ಆಗಿರುವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನು ಕ್ಷಾಮವನ್ನು ತಡೆಯಲು ಹಾಗೂ ಹೇರಳ ಮತ್ಸ್ಯ ಸಂಪತ್ತು ಲಭಿಸಲು ಪೂರಕವಾಗಿ ಸಮಗ್ರ ನೀತಿಯೊಂದನ್ನು ಜಾರಿಗೆ ತರಲು ಎಲ್ಲ ರಾಜ್ಯಗಳ ಮೀನುಗಾರಿಕೆಗೆ ಸಂಬಂಧಿಸಿದ ಮಂತ್ರಿಗಳು ಹಾಗೂ ಅಧಿಕಾರಿಗಳ ಶೃಂಗ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರಿಂದು ಕುಂದಾಪುರದ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ೧೦೨. ೧೧ ಕೋಟಿ ವೆಚ್ಚದಲ್ಲಿ ಬ್ರೇಕ್ ವಾಟರ್ ವಿಸ್ತರಣಾ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಮೀನುಗಾರರ ಪ್ರಮುಖ ಜೀವನಮಾರ್ಗವಾದ ಮತ್ಸ್ಯ ಸಂಪತ್ತು ಸಂರಕ್ಷಣೆಯೂ ನಮ್ಮೆಲ್ಲರ ಹೊಣೆಯಾಗಿದ್ದು, ಮೀನುಗಾರಿಕೆ ಅಭಿವೃದ್ಧಿಗೆ ಸಮಗ್ರವಾದ ನೀತಿಯೊಂದನ್ನು ರೂಪಿಸುವ ಅಗತ್ಯವಿದೆ; ಮೀನುಗಾರರ ಎಲ್ಲ ಸಮಸ್ಯೆಗಳು ಈಗಾಗಲೇ ಸರ್ಕಾರ ಸ್ಪಂದಿಸಿದ್ದು, ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಮತ್ತು ಬೇಡಿಕೆ ಅರ್ಜಿ ಸಲ್ಲಿಸಿದ ಎಲ್ಲ ಮೀನುಗಾರರಿಗೆ ಸಾಧ್ಯತಾ ಸರ್ಟಿಫಿಕೇಟ್‌ನ್ನು ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಮೀನುಗಾರರಿಗೆ ಕೊಟ್ಟ ಮಾತಿನಂತೆ ಅವರ ಬೇಡಿಕೆಗಳನ್ನು ಈಡೇರಿಸಿದ್ದು, ಶಂಕುಸ್ಥಾಪನೆಗೊಂಡ ಮೇಲಿನ ಕಾಮಗಾರಿಗೆ ಪ್ರಥಮ ಹಂತವಾಗಿ ನಾಲ್ಕು ಕೋಟಿ ರೂ.ಗಳನ್ನು ಒಂದು ವಾರದೊಳಗೆ ಬಿಡುಗಡೆ ಮಾಡುವ ಭರವಸೆಯನ್ನು ಸಚಿವರು ನೀಡಿದರು.

ಮಡಿಕಲ್ ಬಂದರು ಅಭಿವೃದ್ಧಿಗೆ ಹೊಸ ಯೋಜನಾ ವರದಿಯನ್ನು ಕ್ಯಾಬಿನೆಟ್ ನಲ್ಲಿ ಮಂಡಿಸಿ ಅನುಮೋದನೆಗೆ ಯತ್ನಿಸುವ ಶಾಸಕ ಗೋಪಾಲ ಪೂಜಾರಿಯವರ ಬೇಡಿಕೆಯನ್ನು ಈಡೇರಿಸುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಹೇಳಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೀನುಗಾರರಿಗೆ ನೆರವಾಗುವ ಯೋಜನೆಗಳನ್ನು ಅಧಿಕಾರಿಗಳು ಕಾಲಮಿತಿಯೊಳಗೆ ಮುಗಿಸಲು ಸೂಚನೆ ನೀಡಿದರು.

ಮೀನುಗಾರರ ಮುಖಂಡರಾದ ನಾಗಾ ಖಾರ್ವಿ, ಮಂಜು ಬಿಲ್ಲವ, ಪುರುಷೋತ್ತಮ ಆರ್ಕಾಟ್, ರಮೇಶ್ ಕುಂದರ್ ಇದ್ದರು. ಮೀನುಗಾರಿಕೆ ಇಲಾಖೆ ನಿರ್ದೇಶಕ ಹೆಚ್ ಎಸ್ ವೀರಪ್ಪ ಗೌಡ, ಜಂಟಿ ನಿರ್ದೇಶಕ ಗಣಪತಿ ಭಟ್, ಉಪನಿರ್ದೇಶಕರಾದ ಮಹೇಶ್ ಕುಮಾರ್, ಹಿರಿಯ ಸಹಾಯಕ ನಿರ್ದೇಶಕರಾದ ಪಾರ್ಶ್ವನಾಥ್. ಸಹಾಯಕ ನಿರ್ದೇಶಕರಾದ ಅಂಜನಾದೇವಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಇಂಜಿನಿಯರ್‌ಗಳಿದ್ದರು.

No Comments

Leave A Comment