Log In
BREAKING NEWS >
ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿ ಶಿರೂರು ಶ್ರೀನಾಮಪತ್ರ ಸಲ್ಲಿಕೆ.....ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಸ್ವಾಭಿಮಾನದ ತೀರ್ಮಾನ; ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆ

srinivasaಬೆಂಗಳೂರು: ಕಾಂಗ್ರೆಸ್‌ ಪಕ್ಷ ತೊರೆದಿರುವ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಅವರು ಕೊನೆಗೂ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿರುವುದು ಅಧಿಕೃತವಾಗಿದೆ.

ಶನಿವಾರ ಡಾಲರ್ಸ್ ಕಾಲೋನಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್,  ನನ್ನ ರಾಜಕೀಯದ ಕೊನೆಯ ದಿನಗಳಲ್ಲಿ ಸ್ವಾಭಿಮಾನದ ತೀರ್ಮಾನ ಕೈಗೊಂಡಿರುವೆ. ಹಾಗಾಗಿ ನಾನು ಭಾರತೀಯ ಜನತಾ ಪಕ್ಷ ಸೇರಲು ನಿರ್ಧರಿಸಿರುವುದಾಗಿ ಹೇಳಿದರು.
ಜನವರಿ 2ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಪಕ್ಷದ ವರಿಷ್ಠರ ಮುಂದೆ ಬಿಜೆಪಿಗೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು.

ತದನಂತರ ಮೈಸೂರು ಅಥವಾ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಮಾಡುವ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ವಿವರಿಸಿದರು.

ಶ್ರೀನಿವಾಸ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನ ಆರಂಭಿಸಿದ್ದರು. ಜೆಡಿಎಸ್‌ ಕೂಡ ಬಲವಾಗಿಯೇ ತನ್ನತ್ತ ಸೆಳೆಯುವ ಪ್ರಯತ್ನ ನಡೆಸಿತು. ಆದರೆ, ಶ್ರೀನಿವಾಸಪ್ರಸಾದ್‌ ಅವರ ಆಪ್ತರು ಮತ್ತು ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾಗುವುದೇ ಸೂಕ್ತ ಎಂಬ ನಿಲುವು ವ್ಯಕ್ತಪಡಿಸಿದ್ದರಿಂದ ಬಿಜೆಪಿಯತ್ತಲೇ ಹೆಜ್ಜೆ ಹಾಕುವ ತೀರ್ಮಾನ ಕೈಗೊಂಡಿದ್ದಾರೆ ಎಂದು ಈ ಮೊದಲೇ ಮೂಲಗಳು ತಿಳಿಸಿದ್ದವು.

ಹಳೆ ಮೈಸೂರು ಭಾಗದಲ್ಲಿ ಪ್ರಭಾವಿ ದಲಿತ ಮುಖಂಡರಾಗಿರುವ ಶ್ರೀನಿವಾಸ ಪ್ರಸಾದ್‌ ಅವರನ್ನು ಸೆಳೆಯುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಮೈಸೂರಿನಲ್ಲೇ ಬಲವಾದ ಪೆಟ್ಟು  ನೀಡುವ ಉದ್ದೇಶ ಬಿಜೆಪಿ ನಾಯಕರದ್ದು ಎಂದು ಹೇಳಲಾಗುತ್ತಿದೆ.

No Comments

Leave A Comment