Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ISIS LInk : ಮುಚ್ಚಳಿಕೆ ಬರೆಸಿಕೊಂಡು ಶಂಕಿತನ ಬಿಡುಗಡೆ ಮಾಡಿದ NIA

arrestedಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐಸಿಸ್‌ ನಂಟು ಹೊಂದಿದ ಆರೋಪದಲ್ಲಿ ಶಂಕಿತನೊಬ್ಬನನ್ನು ಎನ್‌ಐಎ ಅಧಿಕಾರಿಗಳು ಶುಕ್ರವಾರ ಬಂಧಿಸಿ ಸುಧೀರ್ಘ‌ ವಿಚಾರಣೆ ನಡೆಸಿ ಭಾನುವಾರ ಬಿಡುಗಡೆಗೊಳಿಸಿದ್ದಾರೆ.

ಬಂಧಿತ ಕೇರಳ ಮೂಲದ ಮುನಾಫ್ ರೆಹಮಾನ್‌ ಎಂಬಾತನಾಗಿದ್ದು, ಈತ ಪತ್ನಿಯೊಂದಿಗೆ ಮಂಗಳೂರಿನಲ್ಲಿ ನೆಲೆಸಿದ್ದ. ಈತ ಕಳೆದ ಕೆಲ ದಿನಗಳಿಂದ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಯತ್ತ ಆಕರ್ಷಿತನಾಗಿ ಮಾನಸಿಕವಾಗಿ ಐಸಿಸ್‌ ಸೇರ್ಪಡೆಯಾಗುವ ಸಿದ್ದತೆಯಲ್ಲಿದ್ದ ಎಂದು ಹೇಳಲಾಗಿದೆ.

ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು  ವಿದೇಶ ಪ್ರಯಾಣಕ್ಕೆ ಮುಂದಾಗಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಬಂಧಿಸಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದರು.

ಮುನಾಫ್ ಬಳಿ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದ್ದು, ಎನ್‌ಐಎ ತನಿಖೆಗೆ ಕರೆದಾಗ ಹಾಜರಾಗಬೇಕು, ವಿದೇಶ ಪ್ರಯಾಣ ಮಾಡಬಾರದು ಎಂದು ಷರತ್ತುಗಳನ್ನು ವಿಧಿಸಲಾಗಿದೆ.

No Comments

Leave A Comment