Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಎತ್ತಿನಹೊಳೆ ಯೋಜನೆ ಸಭೆ ವಿಫಲ; ಕರಾವಳಿ ಶಾಸಕರಿಂದ ತೀವ್ರ ವಿರೋಧ

eetthina-holeಬೆಂಗಳೂರು:ತೀವ್ರ ವಿವಾದಕ್ಕೆ ಕಾರಣವಾಗಿದ್ದ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆ ವಿಫಲವಾಗಿದೆ.

ಎತ್ತಿನಹೊಳೆ ಯೋಜನೆ ಸಮಸ್ಯೆ ಪರಿಹಾರ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಕರಾವಳಿ ಭಾಗದ ಶಾಸಕರು ಯೋಜನೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಎತ್ತಿನಹೊಳೆ ಯೋಜನೆಗೆ ಬದ್ಧ ಎಂಬ ಸರ್ಕಾರದ ನಿಲುವನ್ನು ಕರಾವಳಿ ಭಾಗದ ಬಿಜೆಪಿ ಶಾಸಕರು ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಯುಟಿ ಖಾದರ್ ಅವರನ್ನು ಬಿಜೆಪಿ ಶಾಸಕರು ತರಾಟೆಗೆ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

No Comments

Leave A Comment