Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಅಮೆರಿಕಾ ಮಹಿಳೆ ಸಾಮೂಹಿಕ ಅತ್ಯಾಚಾರ ಪ್ರಕರಣ: 4 ಆರೋಪಿಗಳ ಬಂಧನ

gang-rapeನವದೆಹಲಿ: ರಾಜಧಾನಿ ದೆಹಲಿಯಲ್ಲಿ ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ನ ಇಬ್ಬರು ಸಿಬ್ಬಂದಿ ಸೇರಿದಂತೆ ಓರ್ವ ಟೂರ್ ಗೈಡ್ ಹಾಗೂ ಚಾಲಕನೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ  ಫೈವ್ ಹೋಟೆಲ್ ವೊಂದರಲ್ಲಿ ಹೋಟೆಲ್ ನ ಸಿಬ್ಬಂದಿಗಳು ಸೇರಿದಂದೆ ಐವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಎಂದು ಅಮೆರಿಕಾ ಮೂಲದ ಮಹಿಳೆಯೊಬ್ಬರು ಪ್ರಕರಣವೊಂದನ್ನು ದಾಖಲಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಅಧಿಕಾರಿಗಳು ಡಿಸೆಂಬರ್ 3 ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮತ್ತೋರ್ವನಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಬಂಧಿತ ಆರೋಪಿಗಳ ಕುರಿತಂತೆ ಮಾಹಿತಿ ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

No Comments

Leave A Comment