Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಥಾಣೆ: ಹಳಿ ತಪ್ಪಿದ ಕುರ್ಲಾ-ಅಂಬೇರ್’ನಾಥ್ ರೈಲು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

local-train-derailಮುಂಬೈ: ಮುಂಬೈನ ಥಾಣೆ ಜಿಲ್ಲೆಯಲ್ಲಿ ಕುರ್ಲಾ-ಅಂಬೇರ್ ನಾಥ್ ರೈಲೊಂದು ಹಳಿ ತಪ್ಪಿದ್ದು, ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಥಾಣೆಯ ಕಲ್ಯಾಣ್ ಮತ್ತು ವಿತ್ತಲ್ವಾಡಿ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5.23 ಸುಮಾರಿಗೆ ಘಟನೆ ನಡೆಸಿದ್ದು, ಕರ್ಲಾ-ಅಂಬೇರ್ ನಾಥ್ ಸ್ಥಳೀಯ ರೈಲಿನ 5 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ರೈಲು ಹಳಿ ತಪ್ಪಿದ್ದರಿಂದಾಗಿ ಕೆಲವೆಡೆ ರೈಲು ಸಂಚಾರದಲ್ಲಿ ವ್ಯತ್ಯಯಗಳು ಉಂಟಾಗಿದ್ದು, ಕಲ್ಯಾಣ್-ಕರ್ಜತ್ ಕಡೆಯಿಂದ ಬರುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿನ್ನೆಯಷ್ಟೇ ಉತ್ತರ ಪ್ರದೇಶದ ಕಾನ್ಪುರದ ಬಳಿ ಅಜ್ಮೆರ್-ಸೀಲ್ದಹ್ ಎಕ್ಸ್ ಪ್ರೆಸ್ ರೈಲೊಂದು ಹಳಿ ತಪ್ಪಿತ್ತು. ಘಟನೆಯಲ್ಲಿ 62 ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು

No Comments

Leave A Comment