Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಕಾಶ್ಮೀರ: ಬಂಡೀಪುರದಲ್ಲಿ ಅಡಗಿ ಕುಳಿತಿರುವ ಉಗ್ರರು, ಕಾರ್ಯಾಚರಣೆಗಿಳಿದ ಯೋಧರು

army-borderನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡೀಪುರದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಕಾರ್ಯಾಚರಣೆ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ.

ಬಂಡೀಪುರದ ಶೆಹ್ಗುಂಡ್ ಹಜಿನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ ಯೋಧರು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಇದೀಗ ಸ್ಥಳದ ಸುತ್ತಲೂ ಯೋಧರು ಸುತ್ತುವರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಟ್ವಿಟರ್ ನಲ್ಲಿ ಹೇಳಿದ್ದಾರೆ.ಕೆಲ ದಿನಗಳ ಹಿಂದಷ್ಟೇ ಕಾಶ್ಮೀರ ಮೂಲದ ಲಷ್ಕರ್-ಇ-ತೊಯ್ಬಾದ ಮುಖ್ಯ ಕಮಾಂಡರ್ ಹಾಗೂ ಇಂಜಿನಿಯರ್ ವಿದ್ಯಾರ್ಥಿಯೊಬ್ಬ ಉಗ್ರ ಸಂಘಟನೆಯೊಂದಕ್ಕೆ ಸೇರ್ಪಡೆಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರದ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಬಂಡೀಪುರದಲ್ಲಿ ಉಗ್ರರು ದಾಳಿ ನಡೆಸಲು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ.

No Comments

Leave A Comment