Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ಸತ್ಯ ಹೊರ ಬರಲಿ : ಜಯಾ ಸಾವಿನ ಕುರಿತು ಹೈಕೋರ್ಟ್‌ ಜಡ್ಜ್ ಅನುಮಾನ !

jayaಚೆನ್ನೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಕುರಿತು ಮದ್ರಾಸ್‌ ಹೈಕೋರ್ಟ್‌ ಗುರುವಾರ ಅನುಮಾನ ವ್ಯಕ್ತಪಡಿಸಿದ್ದು, ಮತ್ತೆ ಏಕೆ ಮರಣೋತ್ತರ ಪರೀಕ್ಷೆ ನಡೆಸಬಾರದು ಎಂದು ಪ್ರಶ್ನಿಸಿದೆ.

ಜಯಲಲಿತಾ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಮೂರ್ತಿ ವೈದ್ಯಲಿಂಗಂ ಅವರು ‘ಮಾಧ್ಯಮಗಳು ಈ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತ ಪಡಿಸಿದ್ದು, ನನಗೂ ಈ ಬಗ್ಗೆ ಅನುಮಾನ ಇದೆ’ ಎಂದಿದ್ದಾರೆ.

‘ಈ ಬಗ್ಗೆ ಸತ್ಯ ಹೊರ ಬರಬೇಕಾಗಿದ್ದು, ಆಕೆಯ ದೇಹವನ್ನು ಏಕೆ ಸರಿಯಾದ ವೈದ್ಯಕೀಯ ಪರೀಕ್ಷೆ ನಡೆಸಬಾರದು’ ಎಂದು ಪ್ರಶ್ನಿಸಿದ್ದಾರೆ.

‘ಜಯಲಲಿತಾ ಅವರ ನಿಧನದ ಬಳಿಕವಾದರೂ ಆಸ್ಪತ್ರೆಯಲ್ಲಿ ನೀಡಲಾದ ಚಿಕಿತ್ಸೆಗಳ ಬಗ್ಗೆ ಬಹಿರಂಗಪಡಿಬೇಕು,ಸತ್ಯ ಹೊರ ಬರಬೇಕು ‘ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

No Comments

Leave A Comment