Log In
BREAKING NEWS >
ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು....

ಜಮ್ಮು-ಕಾಶ್ಮೀರದಲ್ಲಿ ಎನ್’ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

indian-army-borderಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆಂದು ಮಂಗಳವಾರ ಮೂಲಗಳಿಂದ ತಿಳಿದುಬಂದಿದೆ.

ಕಳೆದ ರಾತ್ರಿ ಉಗ್ರರು ಓಡಾಡುತ್ತಿರುವುದಾಗಿ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಹರಿತಾರ್’ನ ಸೋಪೋರ್ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಎನ್ ಕೌಂಟರ್ ನಡೆಸಿ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಸ್ಥಳದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡುಬಂದಿತ್ತು. ಕಾರ್ಯಾಚರಣೆಗಿಳಿದಾಗ ಸೇನೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

No Comments

Leave A Comment