Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಜಸ್ಟೀಸ್ ಖೇಹರ್ ಪ್ರಮಾಣ ವಚನ ಸ್ವೀಕಾರ

chief-justicನವದೆಹಲಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರ ಅಧಿಕಾರಾವಧಿ ನಿನ್ನೆಗೆ ಮುಗಿದಿದೆ.

ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನ್ಯಾಯಮೂರ್ತಿ ಖೇಹರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಚಿವರು ಹಾಜರಿದ್ದರು.

ಡಿಸೆಂಬರ್ 19ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನ್ಯಾಯಮೂರ್ತಿ ಖೇಹರ್ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅನುಮೋದನೆ ನೀಡಿ ಅಂಕಿತ ಹಾಕಿದ್ದರು.

64 ವರ್ಷದ ಖೇಹರ್ ಇಂದು ಭಾರತದ 44ನೇ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದು ಮುಂದಿನ ಏಳು ತಿಂಗಳುಗಳ ಕಾಲ   ಹುದ್ದೆ ನಿರ್ವಹಿಸಲಿದ್ದಾರೆ.

ನ್ಯಾಯಮೂರ್ತಿ ಖೇಹರ್ ಅವರನ್ನು ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಬಾರದೆಂದು ಒತ್ತಾಯಿಸಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ಕೂಡ ತಳ್ಳಿ ಹಾಕಿತ್ತು. ಈ ಹಿಂದೆ ಸುಪ್ರೀಂ ಕೋರ್ಟ್ ಇಂತಹ ಎರಡು ಅರ್ಜಿಗಳನ್ನು ತಿರಸ್ಕರಿಸಿತ್ತು.  ಸಾರ್ವಜನಿಕ ಹಿತದೃಷ್ಟಿಯಿಂದ ಅರ್ಜಿ ವಜಾಗೊಳಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಮುಖ್ಯ ನ್ಯಾಯಮೂರ್ತಿ ಹುದ್ದೆಗೆ  ನ್ಯಾಯಮೂರ್ತಿ ಖೇಹರ್ ಅವರು ಅನರ್ಹರು ಎಂದು ಪರಿಗಣಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿತ್ತು.

No Comments

Leave A Comment