Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ನಳಿನ್‌ಕುಮಾರ್‌ ವಿರುದ್ಧ ಎಫ್‌ಐಆರ್‌

nalin-kumar-katilಮಂಗಳೂರು: ಕೊಣಾಜೆ ಪೊಲೀಸ್ ಠಾಣೆ ಮುಂಭಾಗ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ನಳಿನ್‌ಕುಮಾರ್‌ ಕಟೀಲ್‌ ವಿರುದ್ಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲು  ಮಾಡಲಾಗಿದೆ.

ಕಾರ್ತಿಕ್‌ ರಾಜ್‌ ಎಂಬ ಯುವಕನ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಾನುವಾರ ಬಿಜೆಪಿ ವತಿಯಿಂದ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡುತ್ತಾ ಪೊಲೀಸರ ವಿರುದ್ಧ ಹರಿಹಾಯ್ದಿದ್ದ ನಳಿನ್‌ಕುಮಾರ್‌, ‘ಹತ್ತು ದಿನಗಳೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ಬಿಜೆಪಿ ಕಾರ್ಯಕರ್ತರಿಗೆ ಸಾಧ್ಯವಿದೆ’ ಎಂದು ನಳಿನ್ ಕುಮಾರ್ ಅವರು ಹೇಳಿದ್ದರು.

No Comments

Leave A Comment