Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

83 ಉಪಗ್ರಹವಲ್ಲ, ಏಕಕಾಲಕ್ಕೆ 103 ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

isroಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಬದಲಿಗೆ ಒಟ್ಟಾರೆ 103 ಉಪಗ್ರಹ ಉಡಾವಣೆ ಮಾಡಲು ಸಿದ್ಧತೆ ನಡೆಸಿದೆ.

ಭಾರತದ ಅತ್ಯಂತ ಯಶಸ್ವೀ ಉಡಾವಣಾ ನೌಕೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್‌ಎಲ್‌ವಿ)-ಸಿ37 ಉಡಾವಣಾ ವಾಹಕದಿಂದ 103 ಉಪಗ್ರಹಗಳ ಉಡಾವಣೆ ಮಾಡಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನಿರ್ದೇಶಕ ಎಸ್ ಸೋಮನಾಥ್ ಅವರು ಹೇಳಿದ್ದಾರೆ.ಕಳೆದ ವಾರವಷ್ಟೇ ಇಸ್ರೋ ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿತ್ತು. ಇದೀಗ 20 ಹೆಚ್ಚುವರಿ ಉಪಗ್ರಹಗಳು ಸೇರ್ಪಡೆಯಾಗಿರುವುದರಿಂದ ಜನವರಿ ಬದಲಿಗೆ ಫೆಬ್ರವರಿಯ ಮೊದಲ ವಾರದಲ್ಲಿ ಉಡಾವಣೆ ನಡೆಸಲಾಗುವುದು ಎಂದು ಸೋಮನಾಥ್ ತಿಳಿಸಿದ್ದಾರೆ.

ಇಸ್ರೇಲ್, ಕಜಕಿಸ್ತಾನ್, ನೆದರ್ಲ್ಯಾಂಡ್, ಸ್ವೀಜರ್ಲ್ಯಾಂಡ್ ಮತ್ತು ಅಮೆರಿಕ ಜರ್ಮನಿ ಸೇರಿದಂತೆ ಮೂರು ಸ್ವದೇಶಿ ಉಪಗ್ರಹಗಳಾದ ಕಾರ್ಟೋಸ್ಯಾಟ್-2 ಸಿರೀಸ್, 730 ಕೆಜಿ, ಐಎನ್ಎಸ್-1ಎ ಮತ್ತು ಐಎನ್ಎಸ್-1ಬಿ 30 ಕೆಜಿಯ ಉಪಗ್ರಹಗಳನ್ನು ಏಕಕಾಲಕ್ಕೆ ಇಸ್ರೋ ಉಡಾವಣೆ ಮಾಡಲಿದೆ.

ಈ ಹಿಂದೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕಕಾಲಕ್ಕೆ ಬರೋಬ್ಬರಿ 20 ಉಪಗ್ರಹಗಳನ್ನು ಉಡಾವಣೆ ಮಾಡಿ ಇತಿಹಾಸ ನಿರ್ಮಿಸಿತ್ತು.

ಇದರೊಂದಿಗೆ ಇಸ್ರೋ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸಿದ ವಿಶ್ವದ 2ನೇ ರಾಷ್ಟ್ರ ಎಂಬ ಹೆಗ್ಗಳಿಕಿಗೆ ಪಾತ್ರವಾಗಿತ್ತು. ಇದೀಗ ಏಕಕಾಲದಲ್ಲಿ 103 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾಯಿಸಿದ್ದೆ ಆದರೆ ಏಕಕಾಲಕ್ಕೆ ಅತೀ ಹೆಚ್ಚು ಉಪಗ್ರಹಗಳನ್ನು ಉಡಾಯಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿದೆ.

ಈ ಹಿಂದೆ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಸಂಖ್ಯೆಯ ಉಪಗ್ರಹಗಳ ಉಡಾವಣೆ ಮಾಡಿದ ದಾಖಲೆ ರಷ್ಯಾ ಹೆಸರಲ್ಲಿದ್ದು, ರಷ್ಯಾದ ಡ್ನೆಪರ್ ಸಿಲೋ ರಾಕೆಟ್ ಮೂಲಕ 2014ರ ಜೂನ್ 19  ರಂದು 33 ಉಪಗ್ರಹಗಳನ್ನು ಒಂದೇ ಬಾರಿ ಉಡಾವಣೆ ಮಾಡಲಾಗಿತ್ತು. ಇದಕ್ಕೂ ಮೊದಲು 2013ರ ನವೆಂಬರ್‌ನಲ್ಲಿ 32 ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಇದರಲ್ಲಿ 5 ಕಿಲೋದಿಂದ  ಹಿಡಿದು 100 ಕಿಲೋಗ್ರಾಂವರೆಗೆ ತೂಕವಿರುವ ಉಪಗ್ರಹಗಳಿದ್ದವು.

No Comments

Leave A Comment