Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಜಮ್ಮು- ಕಾಶ್ಮೀರದಲ್ಲಿ ಎನ್’ಕೌಂಟರ್: ಅಲ್ ಬದರ್ ಸಂಘಟನೆಯ ಉಗ್ರ ಮುಜಫರ್ ಅಹಮದ್ ಹತ್ಯೆ


ನವದೆಹಲಿ:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ನಿಷೇಧಿತ ಅಲ್-ಬದರ್ ಉಗ್ರ ಸಂಘಟನೆಯ ಭಯೋತ್ಪಾದಕ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಿರುವುದಾಗಿ ಶುಕ್ರವಾರ ಮೂಲಗಳು ತಿಳಿಸಿವೆ.

ಜಮ್ಮು ಕಾಶ್ಮೀರದ ಬುದ್ಗಮ್ ಜಿಲ್ಲೆ ಮಚು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಉಗ್ರ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರ ಮುಜಫರ್ ಅಹಮದ್ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸೇರಿಕೊಂಡು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ.ಖಚಿತ ಮಾಹಿತಿ ಆಧಾರದ ಮೇಲೆ ಇಂದು ಬೆಳಗಿನ ಜಾವದಿಂದಲೇ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿತ್ತು. ಇದರಂತೆ ಉಗ್ರ ಮುಜಫರ್ ಅಹಮದ್ ನನ್ನು ಹತ್ಯೆ ಮಾಡಲಾಗಿದೆ.

ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಗುಲ್ಜಾರ್ಪೊರ ಗ್ರಾಮದ ಬಳಿ ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ಇದರಂತೆ ಸೇನಾಪಡೆ ಇಂದು ಬೆಳಿಗ್ಗೆ ಕಾರ್ಯಾಚರಣೆಗಿಳಿದಿತ್ತು.  ಮುಜಾಫರ್ ಅಹಮದ್ ನೈಕು ಅಲಿಯಾಸ್ ಮುಜು ಮೊಲ್ವಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಬಹಳ ಹತ್ತಿರದಿಂದಲೇ ಸೇನಾ ಪಡೆ ಉಗ್ರರನ್ನು ಎನ್ ಕೌಂಟರ್ ನಡೆಸಿ ಹತ್ಯೆ ಮಾಡಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಸೇನಾ ಪಡೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ತಿಳಿದುಬಂದಿದೆ.

No Comments

Leave A Comment