Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಮುಂಬೈ: ಕಪಾಡಿಯಾ ಬಜಾರ್’ನಲ್ಲಿ ಅಗ್ನಿ ಅವಘಡ

ಮುಂಬೈ: ಮುಂಬೈ’ನ ಕುರ್ಲಾದಲ್ಲಿರುವ ಕಪಾಡಿಯಾ ಬಜಾರ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ.

ಇಂದು ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಅಗ್ನಿ ಅವಘಡದಿಂದಾಗಿ ಕೆಲ ಅಂಗಡಿಗಳು ಭಸ್ಮವಾಗಿದ್ದು, ಗೋಡನ್ ನಲ್ಲಿದ್ದ ಸೀರೆ ಹಾಗೂ ಇನ್ನಿತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

No Comments

Leave A Comment