Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕುಸಿತ, ಹಲವರಿಗೆ ಗಾಯ

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.

ವೈಟ್ ಫೀಲ್ಡ್ ನ ಆ್ಯಕ್ಸೆಂಚರ್ ಕಂಪನಿ ಬಳಿ ನಿರ್ಮಿಸುತ್ತಿದ್ದ ಅಪಾರ್ಟ್ ಮೆಂಟ್ ಕುಸಿದಿದ್ದು ಹಲವು ಕೂಲಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ದಿವ್ಯಶ್ರೀ ಬಿಲ್ಡರ್ಸ್ ಕಂಪನಿ ಈ ಅಪಾರ್ಟ್ ಮೆಂಟ್ ನಿರ್ಮಿಸುತ್ತಿತ್ತು, ಇಂದು ಬೆಳಗಿನ ಜಾವ ಕಟ್ಟಡದ 3ನೇ ಅಂತಸ್ತು ಕುಸಿದಿದ್ದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ.

ಮೂರನೇ ಅಂತಸ್ತಿಗೆ ಮೋಲ್ಡ್ ಹಾಕಲಾಗುತ್ತಿತ್ತು. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment