Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ; ಕನಿಷ್ಟ 6 ಸಾವು, 30 ಮಂದಿಗೆ ಗಾಯ

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬರೇಲಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ದುರಂತ ಸಂಭವಿಸಿದ್ದು, ನಿಂತಿದ್ದ ಬಸ್ ಗ್ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಂತೆಯೇ 30 ಮಂದಿ  ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ

No Comments

Leave A Comment