Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

5 ರಾಜ್ಯಗಳಲ್ಲಿ ಪ್ರಧಾನಿ ಮತ್ತು ಇತರೆ ರಾಜಕೀಯ ನಾಯಕರ ಹೋರ್ಡಿಂಗ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗ

ನವದೆಹಲಿ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ರಾಜಕೀಯ ನಾಯಕರ ಭಾವಚಿತ್ರವಿರುವ ಎಲ್ಲಾ ಹೋರ್ಡಿಂಗ್ ಹಾಗೂ ಜಾಹೀರಾತುಗಳನ್ನು ತೆರವುಗೊಳಿಸಿ ಇಲ್ಲವೆ ಕಾಣದಂತೆ ಮುಚ್ಚುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ರಾಜ್ಯಗಳ ಚುನಾವಣಾ ಆಯುಕ್ತರಿಗೆ ಸೂಚಿಸಿದೆ.

ನಿನ್ನೆಯಷ್ಟೇ  ನ್ಯಾಯಯುತ ಚುನಾವಣೆಗಾಗಿ ನರೇಂದ್ರ ಮೋದಿಯವರ ನಾಮಫಲಕಗಳು ಹಾಗೂ ಭಿತ್ತಿಪತ್ರಗಳನ್ನು ತೆಗೆಯಿರಿ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.

ಉತ್ತರ ಪ್ರದೇಶ ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರಗಳಲ್ಲಿ ಫೆಬ್ರವರಿ 4ರಿಂದ ಚುನಾವಣೆ ನಡೆಯುತ್ತಿದ್ದು, ಗ್ಯಾಸ್ ಸಿಲಿಂಡರ್ ಸಂಪರ್ಕ ಒದಗಿಸಿರುವ ಕುರಿತಂತೆ ಈ ಐದು ರಾಜ್ಯಗಳಲ್ಲಿ ಎಲ್ಲೆಡೆ ಪ್ರಧಾನಿ ಮೋದಿಯವರ ನಾಮಫಲಕ ಹಾಗೂ ಭಿತ್ತಿಚಿತ್ರಗಳು ರಾರಾಜಿಸುತ್ತಿವೆ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಜಾಹೀರಾತುಗಳು ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಪತ್ರದಲ್ಲಿ ಹೇಳಿಕೊಂಡಿತ್ತು.

ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪ್ರಧಾನಮಂತ್ರಿಗಳ ಭಾವಿಚಿತ್ರ ಬಳಸಿಕೊಂಡು ಭಿತ್ತಿಚಿತ್ರಗಳು, ನಾಮಫಲಕಗಳು ಹಾಗೂ ಬ್ಯಾನರ್ ಗಳನ್ನು ಹಾಕುವುದು ನೀತಿ ಸಂಹಿತೆಗೆ ವಿರುದ್ಧವಾಗಿದ್ದು, ಇದು ನ್ಯಾಯಯುತ ಚುನಾವಣೆಗೆ ದಾರಿ ಮಾಡಿಕೊಡುವುದಿಲ್ಲ. ಹೀಗಾಗಿ ಕೂಡಲೇ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಜಾಹೀರಾತು ಫಲಕಗಳನ್ನು ತೆಗೆಯುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕೆಂದು ಕಾಂಗ್ರೆಸ್ ಮನವಿ ಮಾಡಿತ್ತು.

No Comments

Leave A Comment