Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಸಹರಾ ಡೈರಿ ಪ್ರಕರಣ: ಪ್ರಧಾನಿ ಮೋದಿ ವಿರುದ್ಧ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್ )ಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಹರಾ ಹಾಗೂ ಬಿರ್ಲಾ ಕಂಪನಿಗಳ ಡೈರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿದ್ದು, ಇದರ ಆಧಾರದ ಮೇಲೆ ವಿಶೇಷ ತನಿಖಾ ತಂಡದಿಂದ(ಎಸ್ಐಟಿ) ತನಿಖೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ತನಿಖೆಗೆ ನಿರಾಕರಿಸಿರುವ ಸುಪ್ರೀಂ ಕೋರ್ಟ್, ಒಂದು ವೇಳೆ ಇಂತಹ ಅಸ್ಪಷ್ಟ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆಗೆ ಆದೇಶಿಸಿದರೆ, ಸಂವಿಧಾನಾತ್ಮಕ ಸಂಸ್ಥೆಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದೆ.

ಸಹರಾ ಮತ್ತು ಬಿರ್ಲಾ’ ಕಂಪೆನಿಗಳಿಂದ ವಶಪಡಿಸಿಕೊಂಡ ದಾಖಲೆಗಳಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖ್ಯಮಂತ್ರಿಗಳಿಗೆ ಹಣ ಸಂದಾಯವಾಗಿರುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಇದರ ಜಾಡು ಹಿಡಿದು ತನಿಖೆ ನಡೆಸುವಂತೆ ಸಿಬಿಐ, ಆದಾಯ ತೆರಿಗೆ ಇಲಾಖೆ, ಕೇಂದ್ರ ಜಾಗೃತ ಆಯೋಗಗಳಿಗೆ ದೂರು ಸಲ್ಲಿಸಿದ್ದರೂ ಅವು ತನಿಖೆ ನಡೆಸಲು ನಿರಾಕರಿಸಿವೆ. ಹೀಗಾಗಿ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರು.

ಸಹರಾ ಕಂಪೆನಿ ಹಣ ಪಾವತಿ ಮಾಡಿದ ಬಗ್ಗೆ ತನ್ನ ಡೈರಿಯಲ್ಲಿ ಗುಜರಾತ್, ದೆಹಲಿ, ಛತ್ತೀಸ್ ಘಡ ಮತ್ತು ಮಧ್ಯ ಪ್ರದೇಶ ‘ಸಿಎಂ’ಗಳಿಗೆ ಎಂದು ಬರೆಯಲಾಗಿದೆ. ಇವೆಲ್ಲಾ ನಡೆದಿದ್ದು 2013-14ರಲ್ಲಿ. ಈ ದಾಖಲೆಗಳನ್ನು ಪ್ರಶಾಂತ್ ಭೂಷಣ್ ಸುಪ್ರಿಂ ಕೋರ್ಟಿಗೆ ಸಲ್ಲಿಸಿದ್ದರು.

ಇನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಪ್ರಧಾನಿ ನರೇಂದ್ರ ಮೋದಿ ಅವರು ಸಹರಾ ಕಂಪನಿಯಿಂದ 25 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

No Comments

Leave A Comment