Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಉಡುಪಿಯಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ…

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೊಲೀಸ್ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಎಂಜಿ.ಎಂ ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರವರ ೧೫೪ ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಸಮಾರಂಭ ಮತ್ತು ಬೃಹತ್ ಯುವ ಜಾಥಾಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಗುರುವಾರ ಚಾಲನೆ ನೀಡಿದರು.

ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ನಂತರ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಸ್ವಾಮಿ ವಿವೇಕಾನಂದರ ಕುರಿತ ಕಿರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಸ್ವಾಮಿ ವಿವೇಕಾನಂದರ ಕುರಿತ ಉಪನ್ಯಾಸ ನೀಡಿದ, ಸ್ವಾಸ್ಥ ಹೆಲ್ತ್ ಮತ್ತು ರಿಸರ್ಚ್ ಫೌಂಡೇಶನ್, ಡಿವೈನ್ ಪಾರ್ಕ್ ಸಾಲಿಗ್ರಾಮದ ವೈದ್ಯಕೀಯ ನಿರ್ದೇಶಕ ಡಾ.ವಿವೇಕ ಉಡುಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನದಲ್ಲಿ, ಅಂಜಿಕೆ, ಅಶ್ರದ್ಧೆ, ಅನಾಸಕ್ತಿ, ಅಚಾತುರ್ಯ ಮತ್ತು ಅಹಂಕರಾರಗಳು ಇಲ್ಲದೇ ಇದ್ದುದರಿಂದ ಅವರು ಮಹತ್ ಸಾಧನೆಗಳನ್ನು ಮಾಡಲು ಸಾಧ್ಯವಾಯಿತು, ಯುವ ಜನತೆ ವಿವೇಕಾನಂದರ ಆದರ್ಶ ಮತ್ತು ದೇಶಭಕ್ತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಡಿವೈ‌ಎಸ್ಪಿ ಕುಮಾರಸ್ವಾಮಿ, ತಹಸೀಲ್ದಾರ್ ಮಹೇಶ್ಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗುರುಮೂರ್ತಿ ಕುಲಕರ್ಣಿ, ಸಾಂಖ್ಯಿಕ ಇಲಾಖೆಯ ಅಧಿಕಾರಿ ಶಂಕರಪ್ಪ, ಡಿಡಿಪಿ‌ಐ ದಿವಾಕರ ಶೆಟ್ಟಿ, ಡಾ. ಜಿ.ಶಂಕರ್ ಪ್ರ.ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ರಾವ್, ಬಡಗಬೆಟ್ಟು ಬ್ಯಾಂಕ್‌ನ ಉಪಾಧ್ಯಕ್ಷ ಉಮಾನಾಥ್ ಮತ್ತಿತರರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಅನುರಾಧ ಸ್ವಾಗತಿಸಿದರು, ಪೌರಾಯುಕ್ತ ಮಂಜುನಾಥಯ್ಯ ವಂದಿಸಿದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

No Comments

Leave A Comment