Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಮೇಟಿ ಸೆಕ್ಸ್ ಸೀಡಿ ಪ್ರಕರಣ; ನಾಲ್ವರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು; ಮಾಜಿ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ಸೆಕ್ಸ್ ಸೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಬಾಗಲಕೋಟೆ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

ಆರೋಪಿಗಳು ಪ್ರತಿಯೊಬ್ಬರು ತಲಾ 50ಸಾವಿರ ರೂ. ಬಾಂಡ್ ನೀಡಬೇಕು. ಜಿಲ್ಲಾ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ, ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ಷರತ್ತುವಿಧಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಡಿ.17ರಂದು ಸಂತ್ರಸ್ತ ಮಹಿಳೆ ನವನಗರ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು.ಡಿ.28ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ಜನವರಿ 4ರಂದು ತೀರ್ಪು ಕಾಯ್ದಿರಿಸಿತ್ತು.

ಪ್ರಕರಣದಲ್ಲಿ ಆರೋಪಿಗಳಾದ ಪೇದೆ, ಸುಭಾಷ್ ಮುಗಳಖೋಡ, ಸಿದ್ದಲಿಂಗ, ಮಾರುತಿ ಮಿರಜಕರ್, ಅಶೋಕ್ ಲಾಗಲೋಟಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ.

No Comments

Leave A Comment