Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ನೇಮಕ

ನವದೆಹಲಿ: ಟಿಸಿಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ  ಹಾಗೂ ವ್ಯವಸ್ಥಾಪಕ ನಿರ್ದೇಶಕ ನಟರಾಜ ಚಂದ್ರಶೇಖರನ್ ಅವರು ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ಗುರುವಾರ ನೇಮಕಗೊಂಡಿದ್ದಾರೆ.

ಕಳೆದ ಅಕ್ಟೋಬರ್ 24ರಂದು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಯಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ಮೂರು ತಿಂಗಳೊಳಗೆ ಅವರ ಸ್ಥಾನಕ್ಕೆ ಚಂದ್ರಶೇಖರನ್ ಅವರನ್ನು ಟಾಟಾ ಸನ್ಸ್ ಆಯ್ಕೆ ಮಾಡಿದೆ. ಅಧ್ಯಕ್ಷ ಸ್ಥಾನದಿಂದ ಮಿಸ್ತ್ರಿ ವಜಾಗೊಂಡ ಮಧ್ಯಂತರ ಅಧ್ಯಕ್ಷರಾಗಿ ಬಂದ ರತನ್ ಟಾಟಾ ಹಾಗೂ ಮಿಸ್ತ್ರಿ  ಮಧ್ಯೆ ಕಟು ಆರೋಪ ಪ್ರತ್ಯಾರೋಪಗಳು ನಡೆದಿದ್ದವು.

ಅಕ್ಟೋಬರ್ ನಲ್ಲಿ ಮಿಸ್ತ್ರಿ ವಜಾಗೊಂಡ ನಂತರ ಟಾಟಾ ಸನ್ಸ್ ಆಡಳಿತ ಮಂಡಳಿಯು ಮುಂದಿನ ನಾಲ್ಕು ತಿಂಗಳ ಒಳಗಾಗಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ರತನ್ ಟಾಟಾ ಅವರನ್ನೂ ಒಳಗೊಂಡ ಐವರು ಸದಸ್ಯರ ಆಯ್ಕೆ ಸಮಿತಿಯನ್ನು ರಚಿಸಿತ್ತು. ಇಂದು ಮಧ್ಯಾಹ್ನ ನಾಲ್ಕು ಗಂಟೆಗೆ ದಿಢೀರ್ ಸಭೆ ಸೇರಿದ ಈ ಸಮಿತಿ ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಿದೆ.

ಇನ್ನು ದೇಶದ ಅತಿದೊಡ್ಡ ಸಾಫ್ಟ್ ವೇರ್ ಸಂಸ್ಥೆ ಟಿಸಿಎಸ್ ಸಿಇಒ ಆಗಿ ರಾಜೇಶ್ ಗೋಫಿನಾಥನ್ ಅವರನ್ನು ನೇಮಿಸಲಾಗಿದೆ.

No Comments

Leave A Comment