Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಅಕ್ರಮ ಸಕ್ರಮ ಯೋಜನೆ; ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ: ರಾಜ್ಯ ಸರ್ಕಾರದ ಅಕ್ರಮ ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಡಿಸೆಂಬರ್ 13ರಂದು ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ನಮ್ಮ ಬೆಂಗಳೂರು ಪೌಂಡೇಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು, ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪೀಠ, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ಆದೇಶ ನೀಡಿದೆ.

ಯಾವುದೇ ಕಾರಣಕ್ಕು ಅಕ್ರಮ ಸಕ್ರಮ, ಯೋಜನೆ ಅರ್ಜಿ ಮುಂದುವರಿಸಬಾರದು, ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ. ಅರ್ಜಿದಾರರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ದರು.

ಅಕ್ರಮ ಸಕ್ರಮ ಯೋಜನೆ ಕುರಿತ ಅರ್ಜಿ ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂಕೋರ್ಟ್, ಈ ಬಗ್ಗೆ ವಿಸ್ತೃತ ವಾದ, ಪ್ರತಿವಾದ ಮಂಡನೆಯೊಂದಿಗೆ ಸುದೀರ್ಘ ವಿಚಾರಣೆ ನಡೆಯಲಿದೆ.

No Comments

Leave A Comment