Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದೆಹಲಿ: 500 ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ್ದ ಅತ್ಯಾಚಾರಿ ಬಂಧನ

ನವದೆಹಲಿ: ಅಪ್ರಾಪ್ತ ಬಾಲಕಿಯನ್ನೇ ಗುರಿಯಾಗಿಸಿಟ್ಟುಕೊಂಡು ಅತ್ಯಾಚಾರ ನಡೆಸಿ ನಾಪತ್ತೆಯಾಗುತ್ತಿದ್ದ ಸರಣಿ ಅತ್ಯಾಚಾರಿಯೊಬ್ಬನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುನಿಲ್ ರಸ್ತೋಗಿ (38) ಬಂಧಿತ ಆರೋಪಿ. 7-11 ವರ್ಷದ ಅಪ್ರಾಪ್ತ ಬಾಲಕಿಯನ್ನೇ ಗುರಿ ಮಾಡುತ್ತಿದ್ದ ಈ ಆರೋಪಿ, ಮಕ್ಕಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದ. ಕಳೆದ 13 ವರ್ಷದಿಂದ 500 ಮಕ್ಕಳ ಮೇಲೆ ಈತ ಅತ್ಯಾಚಾರ ನಡೆಸಿದ್ದಾನೆಂದು ದೆಹಲಿ ಪೊಲೀಸರು ಹೇಳಿದ್ದಾರೆ.ಕೇವಲ ದೆಹಲಿಯಲ್ಲಿ ಅಷ್ಟೇ ಅಲ್ಲದೆ, ಉತ್ತರ ಪ್ರದೇಶ ಮತ್ತು ಉತ್ತರಾಖಾಂಡ್ ನಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.ಉತ್ತರಪ್ರದೇಶದಿಂದ ದೆಹಲಿಗೆ ರೈಲಿನಲ್ಲಿ ಪ್ರಯಾಣ ನಡೆಸುತ್ತಿದ್ದ ಈತ ರೈಲಿನಲ್ಲಿ ಬಾಲಕಿಯರು ಒಂಟಿಯಾಗಿ ಸಿಕ್ಕ ಕೂಡಲೇ ಅವರನ್ನು ಅಪಹರಣ ಮಾಡುತ್ತಿದ್ದ. ನಂತರ ನಿರ್ಮಾಣ ಹಂತದ ಕಟ್ಟಗಳಗಳಿಗೆ, ನಿರ್ಜನ ಪ್ರದೇಶಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಈತ ಅವರ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗುತ್ತಿದ್ದ.

ಬಂಧಿತ ಆರೋಪಿ ಶಿಶುಕಾಮಿಯಾಗಿದ್ದು, ವೃತ್ತಿಯಂತೆಯೇ ಈತ ಮಕ್ಕಳನ್ನು ಮದುವೆಯಾಗಿದ್ದಾನೆಂದು ಉಪ ಪೊಲೀಸ್ ಆಯುಕ್ತ ಒಮ್ವಿರ್ ಸಿಂಗ್ ಅವರು ಹೇಳಿದ್ದಾರೆ.ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಅಪ್ರಾಪ್ತ ಬಾಲಕಿಯರನ್ನು ಗುರಿಯಾಗಿಸಿಕೊಟ್ಟುಕೊಂಡು ಅತ್ಯಾಚಾರ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯರ ಮೇಲೆ ಕಣ್ಣು ಹಾಕುತ್ತಿದ್ದ ಈತ, ಮಕ್ಕಳಿಗೆ ತಪ್ಪು ಮಾಹಿತಿ ನೀಡಿ ಅವರನ್ನು ಕರೆದುಕೊಂಡು ಹೋಗುತ್ತಿದ್ದ. ಅಶೋಕ್ ನಗರ, ದೆಹಲಿ, ಘಾಜಿಯಾಬಾದ್, ರುದ್ರಪುರಗಳಲ್ಲೂ ಅಪರಾಧ ಕೃತ್ಯಗಳನ್ನು ಮಾಡಿದ್ದನೆಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಅಧಿಕಾರಿಗಳು ಹೇಳಿದ್ದಾರೆ.

ಡಿಸೆಂಬರ್ 13 ರಂದು ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಆರೋಪಿ ಬಂಧನಕ್ಕಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಬಾಲಕಿಯೊಬ್ಬಳನ್ನು ಅತ್ಯಾಚಾರ ನಡೆಸಿದ್ದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಆರೋಪಿಯನ್ನು ಗುರ್ತಿಸುವುದು ಕಷ್ಟವಾಗಿತ್ತು. ನಂತರ ಸ್ಥಳದಲ್ಲಿದ್ದ ಅಂಗಡಿ ವ್ಯಾಪಾರಸ್ಥರು ನೀಡಿದ ಮಾಹಿತಿ ಮೇರೆಗೆ ಆರೋಪಿಯ ರೇಖಾಚಿತ್ರ ರಚಿಸಲಾಗಿತ್ತು. ನಂತರ ಮನೆ ಮನೆಗೆ ಹೋಗಿ ಆರೋಪಿ ಬಗ್ಗೆ ವಿಚಾರಣೆ ನಡೆಸಲಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುನಿಲ್ ರಸ್ತೋಗಿಯನ್ನು ಈಗಾಗಲೇ ದೆಹಲಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

No Comments

Leave A Comment