ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವದ ಚೂರ್ಣೋತ್ಸವ….ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವದ ಕೊನೆಯ ದಿನವದಾ ಭಾನುವಾರದ ಚೂರ್ಣೋತ್ಸವ ನಡೆಯಿತು.ನಂತರ ಪಲ್ಲ ಪೂಜೆ, ಮಧ್ವಮಂಟಪದಲ್ಲಿ ವಾಲಗ ಮಂಟಪ ಪೂಜೆ,ಅಷ್ಟಾವಧಾನ ಆದ ಮೇಲೆ ಮಧ್ವ ಸರೋವರದಲ್ಲಿ ಅವಭೃತಸ್ನಾನ ನಡೆಯಿತು.ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು, ಶಿರೂರು ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು, ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ರಥವನ್ನು ಎಳೆದು ಉತ್ಸವದಲ್ಲಿ ಪಾಲ್ಗೊಂಡರು.