Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಅಪ್ಪನಿಗೆ ಸೋಲು, ಮಗನಿಗೆ ಗೆಲುವು: ಸಮಾಜವಾದಿ ಪಕ್ಷದ ಚಿಹ್ನೆ ‘ಸೈಕಲ್’ ಅಖಿಲೇಶ್ ಪಾಲು

ನವದೆಹಲಿ: ವಿವಾದಿತ ಸಮಾಜವಾದಿ ಪಕ್ಷದ ಚಿಹ್ನೆ ಸೈಕಲ್ ಅನ್ನು ಕೇಂದ್ರ ಚುನಾವಣಾ ಆಯೋಗ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ನೀಡಿದ್ದು, ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಭಾರಿ ಹಿನ್ನಡೆಯಾಗಿದೆ.

ಅಪ್ಪ- ಮಗನ ನಡುವೆ ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದ್ದ ಸಮಾಜವಾದಿ ಪಕ್ಷದ ಸೈಕಲ್‍ ಚಿಹ್ನೆ ಯಾರಿಗೆ ಸೇರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ನೇತೃತ್ವದ ತ್ರಿಸದಸ್ಯ ಸಮಿತಿ ಇಂದು ತನ್ನ ತೀರ್ಮಾನ ಪ್ರಕಟಿಸಿದೆ.

ತಂದೆಯ ವಿರುದ್ಧವೇ ತಿರುಗಿಬಿದ್ದಿದ್ದ ಅಖಿಲೇಶ್ ಯಾದವ್ ಅವರು ಜನವರಿ 1ರಂದು ರಾಷ್ಟ್ರೀಯ ಅಧಿವೇಶನ ನಡೆಸಿ, ತಾವೇ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದರು. ಇದಾದ ಬಳಿಕ ಪಕ್ಷದ ಚಿಹ್ನೆಯ ಸಮಸ್ಯೆ ಎದುರಾಗಿತ್ತು. ಬಳಿಕ ಅಪ್ಪ-ಮಗ ಇಬ್ಬರೂ ಚುನಾವಣಾ ಆಯೋಗದ ಕದ ತಟ್ಟಿದ್ದರು.

ಕಳೆದ ಶುಕ್ರವಾರ ಆಯೋಗವು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್‌ ಯಾದವ್‌ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಬಣಗಳನ್ನು ವಿಚಾರಣೆಗೆ ಆಹ್ವಾನಿಸಿತ್ತು. ಉಭಯ ಬಣಗಳ ವಾದ-ಪ್ರತಿವಾದ ಆಲಿಸಿದ್ದ ಆಯೋಗ ತೀರ್ಪುನ್ನು ಇಂದಿಗೆ  ಕಾಯ್ದಿರಿಸಿತ್ತು.

No Comments

Leave A Comment