Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಇದೆಂಥಾ ನೈತಿಕ ಪೊಲೀಸ್ ಗಿರಿ? ನಗ್ನಗೊಳಿಸಿ, ಚಪ್ಪಲಿಹಾರ ಹಾಕಿ ಥಳಿತ!

ತುಮಕೂರು: ಕಳೆದ ನಾಲ್ಕು ತಿಂಗಳಿನಿಂದ ಯುವತಿಯೊಬ್ಬಳನ್ನು ಚುಡಾಯಿಸುತ್ತಿದ್ದ ಯುವಕನಿಗೆ ಯುವತಿಯ ತಂದೆ ಸೇರಿದಂತೆ ಸ್ಥಳೀಯರು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನ ಗುಬ್ಬಿಯ ಎಸ್​ಸಿ ಎಸ್​ಟಿ ಕಾಲೋನಿಯ ಅಭಿಷೇಕ್ ಎಂಬ ಯುವಕ ಯುವತಿಯೊಬ್ಬಳಿಗೆ ನಾಲ್ಕು ತಿಂಗಳಿನಿಂದ ಚುಡಾಯಿಸುತ್ತಿದ್ದ ಎಂದು ಆರೋಪಿಸಿರುವ ಗ್ರಾಮಸ್ಥರು ಯುವಕನಿಗೆ ತಕ್ಕ ಪಾಠ ಕಲಿಸೋ ನೆಪದಲ್ಲಿ ವಿವಸ್ತ್ರಗೊಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಹಿಗ್ಗಾಮುಗ್ಗಾ ಹೊಡೆಯುತ್ತಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇದೀಗ ಅಮಾನವೀಯ ಹಲ್ಲೆ ಖಂಡಿಸಿ ಗುಬ್ಬಿ ಪೊಲೀಸ್ ಠಾಣೆ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

No Comments

Leave A Comment