Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿ, ಓರ್ವ ಮಗಳು ಸಾವು

ವಡೋದರ: ಮಹಿಳೆಯೊಬ್ಬರು ತಾನು ಆತ್ಮಹತ್ಯೆಗೆ ಯತ್ನಿಸುವ ಮುನ್ನ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ ದಾರುಣ ಘಟನೆ ಗುಜರಾತ್ ನ ಛೋಟಾ ಉದಯಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆ ಉತಲಿಬೇನ್ ಧನುಕ್(25) ಎಂದು ಗುರುತಿಸಲಾಗಿದ್ದು, ನಿನ್ನೆ ಸಂಜೆ ಕೋಲಿಯತರ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳಾದ ಅಂತಿ(6 ತಿಂಗಳು) ಹಾಗೂ ಸನ್ನಿ(4 ವರ್ಷ)ಗೆ ಬ್ಲಾಂಕೇಟ್ ಸುತ್ತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ ನಂತರ ಧನುಕ್ ಸಹ ಆತ್ಮಹತ್ಯೆ ಯತ್ನಿಸಿ, ಸ್ಥಳದಿಂದ ಓಡಿ ಹೋಗಿದ್ದಾಳೆ. ಮನೆಯಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ಪತಿ ಧೋಕಲಿಯಾ ಧನುಕ್ ಹಾಗೂ ಸ್ಥಳೀಯರು ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರು ತಿಂಗಳು ಮಗು ಮೃತಪಟ್ಟಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಎಸ್ ಎಲ್ ಗಮೆತಿ ಅವರು ಹೇಳಿದ್ದಾರೆ.

ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆಕೆಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

No Comments

Leave A Comment