Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಹಿಂಸಾರೂಪಕ್ಕೆ ತಿರುಗಿದ ಜಲ್ಲಿಕಟ್ಟು ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್!

ಚೆನ್ನೈ: ಕಳೆದೊಂದು ವಾರದಿಂದ ಚೆನ್ನೈ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಜಲ್ಲಿಕಟ್ಟು ಪ್ರತಿಭಟನೆ ಸೋಮವಾರ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಯತ್ನಿಸಿದ ಹಿನ್ನಲೆಯಲ್ಲಿ ಪೊಲೀಸರು  ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು ಲಾಠಿ ಚಾರ್ಜ್ ನಡೆದಿದೆ ಎಂದು ತಿಳಿದುಬಂದಿದೆ.

ನಿನ್ನೆ ತಮಿಳುನಾಡು ಸರ್ಕಾರದ ಬೆಂಬಲದ ನಡುವೆಯೇ ರಾಜ್ಯದ ವಿವಿಧೆಡ ಜಲ್ಲಿಕಟ್ಟು ಆಚರಣೆ ನಡೆದಿತ್ತಾದರೂ, ಪ್ರತಿಭಟನಾಕಾರರು ಮಾತ್ರ ಪ್ರತಿಭಟನೆ ಕೈ ಬಿಟ್ಟಿರಲಿಲ್ಲ. ಹೀಗಾಗಿ ಇಂದು ಪೊಲೀಸರು ಚೆನ್ನೈನ ಮರೀನಾ ಬೀಚ್  ನಲ್ಲಿ ನೆರೆದಿರುವ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಮುಂದಾದರು. ಆದರೆ ತಾತ್ಕಾಲಿಕ ಪರಿಹಾರದಿಂದ ಏನೂ ಪ್ರಯೋಜನವಾಗದು, ಸಂಸ್ಕೃತಿ ಉಳಿವಿಗಾಗಿ ಶಾಶ್ವತ ಕಾನೂನು ರಚಿಸಬೇಕು ಎಂದು ಆಗ್ರಹಿಸಿ  ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದೇ ಕಾರಣಕ್ಕೆ ಪೊಲೀಸರು ಇಂದು ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ಒಪ್ಪದಿದ್ದಾಗ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ಅನಿವಾರ್ಯವಾಗಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು  ಹೇಳಲಾಗುತ್ತಿದೆ.

“ನಾವೇನು ಬೇರೆ ದೇಶದವರಲ್ಲ, ನಾವೂ ಈ ದೇಶದ ಪ್ರಜೆಗಳು, ನಮ್ಮನ್ನು ಪೊಲೀಸರು ಮನಬಂದಂತೆ ಥಳಿಸುತ್ತಿದ್ದಾರೆ”ಪೊಲೀಸರ ಕ್ರಮವನ್ನು ಖಂಡಿಸಿರುವ ವಿದ್ಯಾರ್ಥಿಗಳು “ನಾವೇನು ಬೇರೆ ದೇಶದವರಲ್ಲ, ನಾವೂ ಈ ದೇಶದ ಪ್ರಜೆಗಳು, ನಮ್ಮ ಸಾಂಸ್ಕೃತಿಕ ಪರಂಪರೆ ಉಳಿವಿಗಾಗಿ ಹೋರಾಡುತ್ತಿದ್ದೇವೆ. ಆದರೆ ನಮ್ಮ ಹೋರಾಟಕ್ಕೆ ಪೊಲೀಸರು  ಅಡ್ಡಿಯಾಗುತ್ತಿದ್ದು, ನಮ್ಮನ್ನು ಪೊಲೀಸರು ಮನಬಂದಂತೆ ಥಳಿಸುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಲವಂತವಾಗಿ ತೆರವಿಗೆ ಮುಂದಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಇನ್ನು ಚೆನ್ನೈ ಮರೀನಾ ಬೀಚ್ ನಲ್ಲಿನ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮುಂದಾಗಿದ್ದ ವೇಳೆ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು  ಬಲವಂತವಾಗಿ ನಮ್ಮನ್ನು ತೆರವುಗೊಳಿಸಲು ಮುಂದಾಗುತ್ತಿದ್ದು, ಇದರಿಂದ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಪ್ರತಿಭಟನೆಗೆ ಸಾಥ್ ನೀಡಿದ ಮೀನುಗಾರರುಇನ್ನು ವಿದ್ಯಾರ್ಥಿಗಳ ಪ್ರತಿಭಟನೆ ಚೆನ್ನೈನ ಮೀನುಗಾರರು ಬೆಂಬಲ ನೀಡಲು ಮುಂದಾಗಿದ್ದು, ಇಂದಿನಿಂದ ಪ್ರತಿಭಟನಾಕಾರರೊಂದಿಗೆ ಸೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment