Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಗಣರಾಜ್ಯೋತ್ಸವ ದಿನವೇ ಅಸ್ಸಾಂನಲ್ಲಿ ಸರಣಿ ಬಾಂಬ್ ಸ್ಫೋಟ

ಗುವಾಹಟಿ: 68ನೇ ಗಣರಾಜ್ಯೋತ್ಸವ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿರುವಾಗಲೇ ಅಸ್ಸಾಂನಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ.

ಅಸ್ಸಾಂನ ಚರಾಯ್ಡೋಮ್, ಸಿಬ್ ಸಾಗರ್, ದೀಬ್ರುಗಡ್ ಮತ್ತು ತಿನ್ಸುಕಿಯಾ ಜಿಲ್ಲೆಯಲ್ಲಿ ಉಲ್ಫಾ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

ದೀಬ್ರುಗಢದಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯುವ ಮೈದಾನದಿಂದ 500 ಮೀಟರ್ ದೂರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment